ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಇತ್ತೀಚಿನ ಸಮೀಕ್ಷೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್ ಮಾಡಿದೆ. ಹಸ್ತ ಪಕ್ಷ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಸಿ ಡೈಲಿ ಟ್ರ್ಯಾಕರ್ ಬಹಿರಂಗಪಡಿಸಿದೆ. ಕರ್ನಾಟಕದಲ್ಲಿ 224 ಸ್ಥಾನಗಳಿದ್ದು, ಕಾಂಗ್ರೆಸ್ 157 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ ಎಂದು ಸ್ಪಷ್ಟಪಡಿಸಿದೆ. ಬಿಜೆಪಿ 56 ಸ್ಥಾನಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಜೆಡಿಎಸ್ 34 ಸ್ಥಾನಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಇತರರು ಶೂನ್ಯದಿಂದ ಮೂರು ಸ್ಥಾನಗಳನ್ನು ಪಡೆಯುವ ಅವಕಾಶವಿದೆ ಎಂದು ಅದು ಹೇಳಿದೆ.
▪️ಬಿಜೆಪಿ - 37-56
▪️INC - 130-157
▪️ಜೆಡಿ(ಎಸ್)- 22-34
▪️OTH - 00 - 03
ಸಿ ಡೈಲಿ ಟ್ರ್ಯಾಕರ್ ಪ್ರಕಾರ, ಕಾಂಗ್ರೆಸ್ ಶೇಕಡಾ 44.4, ಬಿಜೆಪಿ ಶೇಕಡಾ 30.6, ಜೆಡಿಎಸ್ ಶೇಕಡಾ 18 ಮತ್ತು ಇತರರು ಶೇಕಡಾ 7 ರಷ್ಟು ಮತಗಳನ್ನು ಪಡೆಯಲಿದ್ದಾರೆ.
ಎಬಿಪಿ-ಸಿ ವೋಟರ್ ನಡೆಸಿದ ಅಭಿಪ್ರಾಯ ಸಂಗ್ರಹ ಸಮೀಕ್ಷೆಯಲ್ಲೂ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯುವತ್ತ ಹೆಜ್ಜೆ ಹಾಕುತ್ತಿರುವಂತಿದೆ. ಪ್ರಸಕ್ತ ಚುನಾವಣೆಯಲ್ಲಿ ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಈ ಸಮೀಕ್ಷೆ ಸ್ಪಷ್ಟಪಡಿಸಿದೆ. ಸಮೀಕ್ಷೆ ಪ್ರಕಾರ ಬಿಜೆಪಿ 74-86, ಕಾಂಗ್ರೆಸ್ 107-119, ಜೆಡಿಎಸ್ 23-35 ಹಾಗೂ ಇತರರು 5 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಇದೆ. ಅದೇ ರೀತಿ ಮತ ಹಂಚಿಕೆ ವಿಚಾರಕ್ಕೆ ಬಂದರೆ ಬಿಜೆಪಿ ಶೇ.35, ಕಾಂಗ್ರೆಸ್ ಶೇ. 40, ಜೆಡಿಎಸ್ ಶೇ.17 ಮತ್ತು ಇತರರು ಶೇ. 8ರಷ್ಟು ಮತಗಳನ್ನು ಪಡೆಯಬಹುದು ಎಂದು ಸಮೀಕ್ಷೆ ಹೇಳಿದೆ. ಮತ ಹಂಚಿಕೆ ವಿಚಾರದಲ್ಲಿ ಬಿಜೆಪಿ ಕಾಂಗ್ರೆಸ್‌ಗಿಂತ ಶೇ.5ರಷ್ಟು ಹಿಂದಿದೆ.
ಕರ್ನಾಟಕದ ಸ್ಥಳೀಯ ಮಾಧ್ಯಮ ‘ಇ-ದಿನ’ ನಡೆಸಿದ ಸಮೀಕ್ಷೆಯಲ್ಲೂ ಜನ ಕಾಂಗ್ರೆಸ್ ನತ್ತ ಒಲವು ತೋರುತ್ತಿದ್ದಾರೆ. ಕಾಂಗ್ರೆಸ್ 134-140 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ.
ಮೇ 8ಕ್ಕೆ ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ಪೂರ್ಣಗೊಳ್ಳಲಿದೆ.ಮೇ 10ರಂದು ಚುನಾವಣೆ ನಡೆಯಲಿದೆ.ಮೇ 13ರಂದು ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ಪ್ರಕಟಿಸಿದೆ.