ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೊಸ ವರ್ಷದದ ಶುಭಾಶಯಗಳನ್ನು ಕೋರಿದ್ದಾರೆ.

    ಕಳೆದ ಎರಡು ವರ್ಷಗಳಲ್ಲಿ ಕೊರೊನಾ ಸಂಕಟದಿಂದಾಗಿ ಎಲ್ಲಾ ವ್ಯವಹಾರಗಳು ಸ್ಥಗಿತಗೊಂಡು, ಎಲ್ಲೆಡೆ ಭಯ, ಆತಂಕ ಹಾಗೂ ಒತ್ತಡದ ವಾತಾವರಣವಿತ್ತು. ಸದ್ಯ ಪರಿಸ್ಥಿತಿ ಕೊಂಚ ಸುಧಾರಣೆಯಾಗಿದ್ದು ಎಲ್ಲಾ ಕ್ಷೇತ್ರಗಳಲ್ಲಿ ವ್ಯವಹಾರಗಳು ಸುಗಮವಾಗಿ ಸಹಜ ಸ್ಥಿತಿಗೆ ಬಂದಿದೆ. ಆದರೂ, ಎಲ್ಲರೂ ಹೊಣೆಗಾರಿಕೆಯಿಂದ ಸರ್ಕಾರದ ಮಾರ್ಗದರ್ಶಿ ಸೂತ್ರಗಳನ್ನು ಪಾಲಿಸಿ ಶಾಂತಿ, ನೆಮ್ಮದಿಯ ಜೀವನ ನಡೆಸುವಂತಾಗಲಿ.

    ಹೊಸ ವರ್ಷ ಎಲ್ಲರಿಗೂ ಹರ್ಷದಾಯಕವಾಗಲಿ ಎಂದು ಹೆಗ್ಗಡೆಯವರು ಹಾರೈಸಿದ್ದಾರೆ.