ಮಂಗಳೂರು: ಎಸ್.ಡಿ.ಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಮತ್ತು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಬಿ.ಯಶೋವರ್ಮ ಅವರ ನಿಧನಕ್ಕೆ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ತೀವ್ರ ಸಂತಾಪ ಸೂಚಿಸಿದೆ.

ಡಾ.ಬಿ.ಯಶೋವರ್ಮ ಅವರು ಶಿಕ್ಷಣ ತಜ್ಞ, ಉತ್ತಮ ವಾಗ್ಮಿ, ಶಿಸ್ತಿನ ಸಿಪಾಯಿ, ನೇರ ನಡೆ-ನುಡಿಯ ಅವರು ದಕ್ಷ ಆಡಳಿತಗಾರರಾಗಿದ್ದರು. ಉಜಿರೆಯನ್ನು ಜಾಗತಿಕ ಮಟ್ಟದಲ್ಲಿ ಗುರುತಿಸುವಂತೆ ಪ್ರಯತ್ನ ಮಾಡಿದ ಭಗೀರಥರು. ತಮ್ಮ ಸ್ನೇಹಪರ ವ್ಯಕ್ತಿತ್ವ, ನಗುಮೊಗದಿಂದಲೇ ಉಜಿರೆಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿಗಳಿಗೆ ಕಾಣುತ್ತಿದ್ದರು. ತಮ್ಮ ಭಾಷಣಗಳಲ್ಲಿ ಹಾಗೂ ಬದುಕಿನಲ್ಲಿ ಮೌಲ್ಯಗಳಿಗೆ ಹೆಚ್ಚಿನ ಬೆಲೆ ನೀಡುತ್ತಿದ್ದ ಯಶೋವರ್ಮ ಅವರ ಆತ್ಮಕ್ಕೆ ಶಾಂತಿ ಲಭಿಸಲಿ. ದುಃಖತಪ್ತ ಕುಟುಂಬ, ಶಿಷ್ಯರು ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಪರಮಾತ್ಮನು ನೀಡಲಿ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ, ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯ ಕೆ.ಹರೀಶ್ ಕುಮಾರ್ ಸಂತಾಪ ಸೂಚಿಸಿದ್ದಾರೆ.