ಭಾರತ ಸರ್ಕಾರ ಯುವ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಉಡುಪಿ ವತಿಯಿಂದ ಆಯೋಜಿಸಿದ ದೇಶದ ಅಮೃತ ಮಹೋತ್ಸವ ವರ್ಷದ ಕ್ಲೀನ್ ಇಂಡಿಯಾ ಅಭಿಯಾನದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ಗೆ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪ್ರಶಸ್ತಿ ಲಭಿಸಿದೆ.

    ಉಡುಪಿಯ ಪೂರ್ಣ ಪ್ರಜ್ಞಾ ಕಾಲೇಜಿನ ಸಭಾಂಗಣದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಪ್ರಶಸ್ತಿ ಪ್ರದಾನ ಮಾಡಿದರು.

    ಈ ಸಂದರ್ಭದಲ್ಲಿ ಉಡುಪಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ನೆಹರು ಯುವ ಕೇಂದ್ರದ ಜಿಲ್ಲಾ ಸಮಾನ್ವಯಾಧಿಕಾರಿ ವಿಲ್ಪ್ರೆಡ್ ಡಿಸೋಜಾ, ಉಡುಪಿಯ ಪೂರ್ಣ ಪ್ರಜ್ಞಾ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಘುವೇಂದ್ರ ಭಟ್ ಮೊದಲಾದವರಿದ್ದರು.

    ಜಿಲ್ಲಾ ಪ್ರಶಸ್ತಿಯನ್ನು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಪರವಾಗಿ ಸಂಘದ ಅಧ್ಯಕ್ಷ ಪ್ರಶಾಂತ್ ಪೂಜಾರಿ ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಂಘದ ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಪೂವಾಧ್ಯಕ್ಷರಾದ ದಿನೇಶ್ ಬೀರೊಟ್ಟು, ಸತೀಶ್ ಅಬ್ಬನಡ್ಕ, ಉದಯ ಅಂಚನ್, ಉಪಾಧ್ಯಕ್ಷ ಸುರೇಶ್ ಅಬ್ಬನಡ್ಕ, ಕಾರ್ಯದರ್ಶಿ ಸುರೇಶ್ ಕಾಸ್ರಬೈಲು, ಅಂತರಿಕ ಲೆಕ್ಕಪರಿಶೋಧಕರಾದ ಅಬ್ಬನಡ್ಕ ಹರಿಪ್ರಸಾದ್ ಆಚಾರ್ಯ, ಸದಸ್ಯರಾದ ಬಾಲಕೃಷ್ಣ ಕುಂದರ್, ಲಲಿತಾ ಆಚಾರ್ಯ, ಪದ್ಮಶ್ರೀ ಪೂಜಾರಿ, ಹರಿಣಾಕ್ಷಿ ನಂದೀಶ್, ಕೀರ್ತನ್ ಕುಮಾರ್, ಪ್ರಶಾಂತ್ ಬೋಳ ಮೊದಲಾದವರಿದ್ದರು.