ರಾಷ್ಟ್ರೀಯ ಶಿಕ್ಷಣ ನೀತಿ- 2020 ರ ಶಿಫಾರಸುಗಳಿಗೆ ಅನುಗುಣವಾಗಿ ರಾಜ್ಯ ಪಠ್ಯಕ್ರಮದ ಚೌಕಟ್ಟನ್ನು ರೂಪಿಸಲು ರಚಿಸಲಾಗಿರುವ ಚಾಲನಾ ಸಮಿತಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಶಿಕ್ಷಣಶಾಸ್ತ್ರ ವಿಭಾಗದ ಸಂಯೋಜಕ ಡಾ. ಚಿದಾನಂದ ಎ ಎಲ್‌ ಅವರನ್ನು ಸದಸ್ಯರನ್ನಾಗಿ ಆಯ್ಕೆ ಮಾಡಿ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಸುಬ್ರಹ್ಮಣ್ಯ ಯಡಪಡಿತ್ತಾಯ ಹಾಗೂ ಕುಲಸಚಿವ ಡಾ. ಕಿಶೋರ್‌ ಕುಮಾರ್‌ ಸಿ ಕೆ ಅವರು ಡಾ. ಚಿದಾನಂದ ಅವರನ್ನು ಅಭಿನಂದಿಸಿದ್ದಾರೆ.