ಮೂಡುಬಿದಿರೆ: ಸಾವಿರ ಕಂಬ ಬಸದಿ ಪರಿಸರದಲ್ಲಿ ಸ್ವಸ್ತಿ ಶ್ರೀ ಜೈನ ವಸತಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವು ದಿನಾಂಕ 14-11-2025 ರಂದು, ಮಕ್ಕಳ ದಿನಾಚರಣೆಯ ಅಂಗವಾಗಿ, ಮಾಜಿ ಪ್ರಧಾನ ಮಂತ್ರಿ ಜವಾಹರಲಾಲ್ ನೆಹರು ಅವರ ಜನ್ಮದಿನದಂದು ಬೆಳಿಗ್ಗೆ 9.30ಕ್ಕೆ ಭವ್ಯವಾಗಿ ನೆರವೇರಿತು.

ಕಾರ್ಯಕ್ರಮವು ಕಾಲೇಜಿನ ಸ್ಥಾಪಕ ಅಧ್ಯಕ್ಷರಾದ ಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಸ್ವಾಮೀಜಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು.

ಕಾರ್ಯಕ್ರಮವನ್ನು ಶ್ರೀ ಎ. ಸುದೀಶ್ ಕುಮಾರ್ (ಬೆಟ್ ಕೇರಿ ಮನೆತನ) ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಮಾತನಾಡಿದ ಅವರು, “ಮಕ್ಕಳಲ್ಲಿ ವಿವಿಧ ರೀತಿಯ ಪ್ರತಿಭೆಗಳು ಅಡಗಿವೆ. ಕ್ರೀಡೆ ಮಕ್ಕಳ ಸಮಗ್ರ ಅಭಿವೃದ್ಧಿಗೆ ಅತ್ಯವಶ್ಯಕ. ಮಕ್ಕಳ ಪ್ರತಿಭೆಯನ್ನು ಗುರುತಿಸಿ ಸರಿಯಾದ ಮಾರ್ಗದರ್ಶನ ನೀಡಬೇಕು” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬಸದಿ ಮುಕ್ತೇಸರರಾದ ಪಟ್ಣ ಶೆಟ್ಟಿ ಸುದೇಶ್ ಕುಮಾರ್ ಹಾಜರಿದ್ದು ಶುಭ ಹಾರೈಸಿದರು.

ಮುಖ್ಯ ಅತಿಥಿ ಉದ್ಯಮಿ ಶ್ರೀ ಪೂರ್ಣಚಂದ್ರ ಜೈನ್ (ಮೂಡುಬಿದ್ರೆ) ಮಾತನಾಡುತ್ತಾ, “ಮಕ್ಕಳ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಕ್ರೀಡೆ ಅತ್ಯಂತ ಮುಖ್ಯ. ಕ್ರೀಡೆ ಮಕ್ಕಳಲ್ಲಿ ಶಿಸ್ತಿನ ಜೊತೆಗೆ ಆರೋಗ್ಯಕರ ಜೀವನಕ್ಕೆ ಪೂರಕ” ಎಂದು ಅಭಿಪ್ರಾಯಪಟ್ಟರು.

ಅಧ್ಯಕ್ಷತೆಯನ್ನು ವಹಿಸಿದ ಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ವಿದ್ಯಾರ್ಥಿಗಳು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಪ್ರೇರೇಪಿಸಿ, “ಕ್ರೀಡೆ ಓದಲು ಉತ್ಸಾಹ ಮತ್ತು ಸ್ಪೂರ್ತಿಯನ್ನು ನೀಡುತ್ತದೆ. ಮಾನಸಿಕ ಹಾಗೂ ದೈಹಿಕ ಸಾಮರ್ಥ್ಯಗಳನ್ನು ಬೆಳೆಸಲು ಕ್ರೀಡೆ ಅವಶ್ಯಕ” ಎಂದು ಆಶಯ ವಿವರಿಸಿದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಸೌಮ್ಯಶ್ರೀ ಸ್ವಾಗತ ಭಾಷಣ ಮಾಡಿದರು. ಉಪನ್ಯಾಸಕಿ ಸುಜಾತಾ ಧನ್ಯವಾದ ತಿಳಿಸಿದರು.

ಉದ್ಘಾಟನಾ ಸಮಾರಂಭದ ಬಳಿಕ ವಿವಿಧ ಕ್ರೀಡಾ ಸ್ಪರ್ಧೆಗಳು ಭಾವೋದ್ರಿಕ್ತವಾಗಿ ನಡೆಯಿತು.