ಕರಾವಳಿ, ಬೆಂಗಳೂರು ಸಹಿತ ರಾಜ್ಯದ ನಾನಾ ಕಡೆ ಭಾರೀ ಮಳೆಯಾಗಿದೆ. ಬೀದರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಿಡಿಲು ಬಡಿದು ತಲಾ ಒಬ್ಬರು ಸಾವಿಗೀಡಾಗಿದ್ದಾರೆ. 

ಉಡುಪಿಯಲ್ಲಿ ಸಿಡಿಲಿಗೆ ಮಹಿಳೆಯೊಬ್ಬರು ಗಾಯಗೊಂಡರು. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಮಳೆ ಸುರಿದಿದೆ.

ದಕ್ಷಿಣ ಕನ್ನಡದ ಕಾರಿಂಜದಲ್ಲಿ ದೊಡ್ಡ ಬಂಡೆ ಉರುಳಿ ಸಾಕಷ್ಟು ಹಾನಿ ಉಂಟುಮಾಡಿದೆ. ಕೃಷಿ ಹಾನಿಯಾಗಿರುವಂತೆಯೇ ಕೆಲವರು ಹೊಸ ಕೃಷಿ ಕೆಲಸದಲ್ಲಿ ತೊಡಗಿಕೊಂಡಿರುವುದೂ ಕಂಡು ಬಂತು.