ಕಾಲೇಜಿನಲ್ಲಿ ಹಿಜಬ್ ಧರಿಸುವುದನ್ನು ನಿಷೇಧಿಸಿದ ಕರ್ನಾಟಕ ಸರಕಾರದ ತೀರ್ಮಾನ ಎತ್ತಿ ಹಿಡಿದ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನಿಸಿರುವುದನ್ನು ಕೂಡಲೆ ವಿಚಾರಣೆಗೆ ಎತ್ತಿಕೊಳ್ಳುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿತು.

ಹೋಳಿ ಹಬ್ಬದ ಬಳಿಕ ಈ ಮೇಲ್ಮನವಿಯ ಬಗೆಗೆ ಗಮನ ಹರಿಸಲಾಗುವುದು ಎಂದು ಸರ್ವೋಚ್ಚ ನ್ಯಾಯಾಲಯವು ಬುಧವಾರ ಹೇಳಿತು.