ವರದಿ ರಾಯಿ ರಾಜಕುಮಾರ ಮೂಡುಬಿದಿರೆ 

ದ.ಕ. ಜಿಲ್ಲಾಡಳಿತ, ದ.ಕ.ಜಿಲ್ಲಾ ಪಂಚಾಯತ್, ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ದ.ಕ.ಜಿಲ್ಲಾ ಅಂಧತ್ವ ನಿಯಂತ್ರಣ ಅಧಿಕಾರಿಗಳ ಕಚೇರಿ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು, ಮೂಡುಬಿದಿರೆ ತಾಲೂಕು ಸಮುದಾಯ ಆರೋಗ್ಯ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಜನವರಿ 24 ಶುಕ್ರವಾರದಂದು ಬೆಳಿಗ್ಗೆ ಗಂಟೆ 9 ರಿಂದ ಮಧ್ಯಾಹ್ನ ಗಂಟೆ 1 ರ ತನಕ ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಉಚಿತ ಕಣ್ಣಿನ ಪೊರೆ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ನಡೆಯಲಿದೆ. ವಿಶೇಷವಾಗಿ ಹಿರಿಯ ನಾಗರಿಕರು ಈ ಉಚಿತ ಶಿಬಿರದ ಸೌಲಭ್ಯವನ್ನು ಉಪಯೋಗಿಸಿಕೊಳ್ಳಲು ತಾಲೂಕು ವೈದ್ಯಾಧಿಕಾರಿ ಡಾ.ಅಕ್ಷತಾ ವಿನಂತಿಸಿದ್ದಾರೆ.

ಹಿರಿಯ ನಾಗರಿಕರಿಗೆ ಓದುವ ಕನ್ನಡಕದ ಅಗತ್ಯ ಇದ್ದರೆ ಪರೀಕ್ಷಿಸಿ ಶೀಘ್ರ ವಿತರಿಸಲಾಗುವುದು ಎಂದು ಅವರು ತಿಳಿಸಿದರು.