ವರದಿ ರಾಯಿ ರಾಜಕುಮಾರ ಮೂಡುಬಿದಿರೆ 

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪಿಎಂ ವಿಶ್ವಕರ್ಮ ಯೋಜನೆಯ ಫಲಾನುಭವಿಗಳಿಗೆ ಅವಶ್ಯಕ ಉಪಕರಣಗಳನ್ನು ಹೊಂದಿರುವ ಉಚಿತ ಕಿಟ್ ಗಳನ್ನು ಕಿನ್ನಿಗೋಳಿ ಅಂಚೆ ಕಛೇರಿಯಲ್ಲಿ ಫಲಾನುಭವಿಗಳಿಗೆ ವಿತರಿಸಿದರು. ಸಪ್ಟೆಂಬರ್ ಹತ್ತರಂದು ಮಂಗಳೂರು ವಿಭಾಗದ ಕಿನ್ನಿಗೋಳಿ ಅಂಚೆ ಕಚೇರಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕುಶಲಕರ್ಮಿಗಳಿಗೆ ಆರ್ಥಿಕ, ಕೌಶಲ್ಯ ತರಬೇತಿ, ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು, ಸಲಕರಣೆಗಳನ್ನು ಹೊಂದಿರುವ ಕಿಟ್ ಗಳನ್ನು ವಿತರಿಸಿ ಮಾತನಾಡಿದ ಶಾಸಕ ಉಮಾನಾಥ ಕೋಟ್ಯಾನ್ ಕೇಂದ್ರ ಸರ್ಕಾರದಿಂದ ಅಗತ್ಯ ಇರುವ ಹಾಗೂ ಬಡಜನರುಗಳಿಗೆ ಸಾಕಷ್ಟು ಸೌಲಭ್ಯಗಳು ದೊರಕುತ್ತಿದ್ದು ಅವೆಲ್ಲವನ್ನು ಕೂಡ ಒದಗಿಸಲು ಪ್ರಯತ್ನಿಸಲಾಗುತ್ತಿದೆ. ಫಲಾನುಭವಿಗಳು ಅದರ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಂಡು ತಮ್ಮ ಬದುಕನ್ನು ಹಸನುಗೊಳಿಸಿಕೊಳ್ಳಬೇಕು ಎಂದು ವಿನಂತಿಸಿದರು.