ಲೊರೆಟ್ಟೊ, ಸಿ.ಬಿ.ಎಸ್.ಇ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ವಂದನೀಯ ಸ್ವಾಮಿ ಜೇಸನ್ ವಿಜಯ್ ಮೊನಿಸ್ ಹಾಗೂ ಉಪಪ್ರಾಂಶುಪಾಲರಾದ ಅನಿತಾ ಪೈಸ್ ಉಪಸ್ಥಿತರಿದ್ದರು.
ಬಾಲ ಕಾರ್ಮಿಕ ಪದ್ದತಿ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ ವಿದ್ಯಾರ್ಥಿಗಳು ನಾಟಕ, ನೃತ್ಯರೂಪಕ ಹಾಗೂ ನೃತ್ಯ ಪ್ರದರ್ಶನಗಳನ್ನು ನೀಡಿದರು.