ಮಡಂತ್ಯಾರು:  ಸೇಕ್ರೆಡ್ ಹಾರ್ಟ್ ಪ್ರೌಢಶಾಲೆ ಮಡಂತ್ಯಾರು , ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಕರ್ನಾಟಕ ಸರಕಾರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಬಾಲಕ-ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ವು ಸೇಕ್ರೆಡ್ ಹಾರ್ಟ್  ಪದವಿ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ಜುಲೈ 18ರಂದು ಜರುಗಿತು. ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಂ|ಬೇಸಿಲ್ ವಾಸ್ ಅಧ್ಯಕ್ಷತೆ ವಹಿಸಿ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದ ಅವರು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಸವಾಲುಗಳನ್ನು ಎದುರಿಸಿ ಮುನ್ನುಗ್ಗಲು ವಿದ್ಯಾರ್ಥಿ ಜೀವನದ ಆಟೋಟ ಸ್ಪರ್ಧೆಗಳು ಅತಿ ಪ್ರಮುಖವಾದದ್ದು, ವಿದ್ಯಾರ್ಥಿಗಳು ಕ್ರೀಡಾ ಮನೋಭಾವವನ್ನು ಬೆಳೆಸಿಕೊಂಡಾಗ ಉತ್ತಮ ಕ್ರೀಡಾಪಟುಗಳ ಆಗುವುದಕ್ಕೆ ಸಾಧ್ಯ, ಅತ್ಯುತ್ತಮ ಕ್ರೀಡಾಪಟುಗಳನ್ನು ಸಿದ್ಧಗೊಳಿಸಿ ರಾಷ್ಟ್ರಕ್ಕೆ ನೀಡುವುದು ವಿದ್ಯಾಸಂಸ್ಥೆಗಳ ಜವಾಬ್ದಾರಿಯಾಗಿದೆ ಎಂದು  ಹೇಳಿದರು.

ಕ್ಷೇತ್ರಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಎಚ್. ಎಸ್ ,ಮಡಂತ್ಯಾರು ಗ್ರಾಮಪಂಚಾಯತ್ ಅಧ್ಯಕ್ಷೆ ಶಶಿಪ್ರಭಾ, ದೈಹಿಕ ಪರಿವೀಕ್ಷಣಾಧಿಕಾರಿ ಭುವನೇಶ್, ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ವಂ|ಜೆರೊಮ್ ಡಿಸೋಜ, ಸೇಕ್ರೆಡ್ ಹಾರ್ಟ್ ಚರ್ಚ್ ಪಾಲನ ಮಂಡಳಿಯ ಉಪಾಧ್ಯಕ್ಷ ಲಿಯೋ ರೊಡ್ರಿಗಸ್ , ಪ್ರೌಢಶಾಲಾ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ವಿಶ್ವನಾಥ ಪೂಜಾರಿ, ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ವಂ|ದೀಪಕ್ ಡೇಸಾ, ಪುಂಜಾಲಕಟ್ಟೆ ಕ್ಲಸ್ಟರ್ ನ ಸಿ.ಆರ್.ಪಿ ಚೇತನ ,ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಜಯರಾಜ್ ಜೈನ್, ಪುಂಜಾಲಕಟ್ಟೆ ವಲಯ ಸಂಯೋಜಕ ಸುಭಾಶ್ಚಂದ್ರ ,ಸೇಕ್ರೆಡ್ ಹಾರ್ಟ್ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಪ್ರಕಾಶ್ ಡಿಸೋಜಾ, ಶಿಕ್ಷಣ ಸಂಯೋಜಕ ಸಿದ್ದಲಿಂಗಸ್ವಾಮಿ, ಉದ್ಘಾಟನಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು

ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಮೋಹನ್ ನಾಯಕ್ ಸ್ವಾಗತಿಸಿದರು, ಪ್ರೌಢಶಾಲಾ ದೈಹಿಕ ಶಿಕ್ಷಕ ಸಂಜಿತ್ ಕುಮಾರ್ ಶೆಟ್ಟಿ ವಂದಿಸಿದರು, ಅಜಿತ್ ಕುಮಾರ್ ಕೊಕ್ರಾಡಿ ನಿರೂಪಿಸಿದರು.