ಮಂಗಳೂರು:- 2024-25ನೇ ಸಾಲಿಗೆ ನಾಲ್ಕು ವರ್ಷದ ಅವಧಿಯ ಕಾನೂನು ತರಬೇತಿ ಪಡೆಯಲು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಕಾನೂನು ಪದವೀಧರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹತೆ:

ಅಭ್ಯರ್ಥಿಯು ಬಾರ್ ಕೌನ್ಸಿಲ್‍ನಲ್ಲಿ ನೊಂದಾಯಿತರಾದ ಕಾನೂನು ಪದವೀಧರರಾಗಿರಬೇಕು. ಸರ್ಕಾರಿ ವಕೀಲರು ಅಥವಾ 20 ವರ್ಷಗಳ ಕಾಲ ವಕೀಲ ವೃತ್ತಿಯಲ್ಲಿ ಸೇವೆ ಸಲ್ಲಿಸಿರುವ  ನ್ಯಾಯವಾದಿಗಳ ಬಳಿ ತರಬೇತಿಗೆ ನಿಯೋಜಿಸಲಾಗುತ್ತದೆ. ಕುಟುಂಬದ ವಾರ್ಷಿಕ ಆದಾಯ ರೂ. 3.50 ಲಕ್ಷವನ್ನು ಮೀರಿರಬಾರದು. 30 ವರ್ಷದೊಳಗಿನ ವಯೋಮಿತಿಯವರಾಗಿರಬೇಕು, ಅಂತಿಮ ಕಾನೂನು ಪದವಿಯನ್ನು ಪೂರ್ಣಗೊಳಿಸಿ  2 ವರ್ಷ ಮೀರಿರಬಾರದು.

ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನ. ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರ ಕಚೇರಿ  ಪಾಂಡೇಶ್ವರ, ಓಲ್ಡ್ ಕೆಂಟ್ ರಸ್ತೆಯಲ್ಲಿರುವ ಮೌಲನಾ ಅಝಾದ್ ಭವನ ಇಲ್ಲಿಂದ ಪಡೆದುಕೊಳ್ಳಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.