ವಿಧಾನ ಪರಿಷತ್ತಿನ ಸದಸ್ಯ ಮಂಜುನಾಥ ಭಂಡಾರಿ ಅವರು ಗುರುಪುರ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ನೀರುಮಾರ್ಗ, ಗುರುಪುರ ಹಾಗೂ ಎಡಪದವು ಜಿಲ್ಲಾ ಪಂಚಾಯತ್ ಕ್ಷೇತ್ರವಾರು ಸಂವಾದ ಸಭೆ ನಡೆಸಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.
ಕಾರ್ಯಕರ್ತರ ಮನವಿಗಳಿಗೆ ಸ್ಪಂದಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ನೀಡುವುದಾಗಿ ಮಂಜುನಾಥ ಭಂಡಾರಿ ಭರವಸೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ವಿಧಾನ ಪರಿಷತ್ತಿನ ಸದಸ್ಯ ಕೆ.ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ, ದ.ಕ ಜಿಲ್ಲಾ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕೊಳ್ನಾಡು, ಗುರುಪುರ ಬ್ಲಾಕ್‌ನ ಅಧ್ಯಕ್ಷ ಸುರೇಂದ್ರ ಕಾಂಬ್ಳಿ, ದ.ಕ ಜಿಲ್ಲಾ ಎನ್ ಎಸ್ ಯುಐ ಮಾಜಿ ಅಧ್ಯಕ್ಷ ಮಹಮ್ಮದ್ ಅಲ್ತಾಫ್ ಉಪಸ್ಥಿತರಿದ್ದರು.