ಹರಿದ್ವಾರ : ಉಡುಪಿಯ ಶ್ರೀ ಸಂಸ್ಥಾನ ಪೇಜಾವರದ ಪೀಠಾಧಿಪತಿಗಳಾದ ಶ್ರೀ ವಿಶ್ವ ಪ್ರಸನ್ನ ತೀರ್ಥರು ಶ್ರೀ ಕಾಶೀ ಮಠ ಸಂಸ್ಥಾನದ ಹರಿದ್ವಾರ ಪುಣ್ಯಕ್ಷೇತ್ರದಲ್ಲಿರುವ ಶ್ರೀ ವ್ಯಾಸ ಆಶ್ರಮದಲ್ಲಿರುವ ಶ್ರೀ ವ್ಯಾಸ ಮಂದಿರ , ಸದ್ಗುರು ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ವೃನ್ದಾವನ ಭೇಟಿ ಬಳಿಕ ವ್ಯಾಸ ಘಾಟ್ ನಲ್ಲಿ ಗಂಗಾ ದರ್ಶನ ನಡೆಸಿದರು , ಶ್ರೀ ಕಾಶಿ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರು ಪೇಜಾವರ ಶ್ರೀಗಳನ್ನು ಆತ್ಮೀಯವಾಗಿ ಬರಮಾಡಿ ಸ್ವಾಗತಿಸಿದರು. ಪರಸ್ಪರ ಯತಿಗಳವರು ಪುಷ್ಪ ಮಾಲಾರ್ಪಣೆ ಮೂಲಕ ಅಭಿನಂದಿಸಿದರು .
ಈ ಸಂದರ್ಭದಲ್ಲಿ ಪೇಜಾವರ ಶ್ರೀಗಳು ಮಾತನಾಡುತ್ತಾ ಶ್ರೀಗಳವರ ಬಾಂಧವ್ಯ , ಸ್ನೇಹ ಕಂಡು ತುಂಬಾ ಸಂತೋಷವಾಯಿತು ನಮ್ಮೆಲ್ಲರಿಗೂ ಮೂಲಗುರುಗಳಾದ ಮಧ್ವಾಚಾರ್ಯರಿಗೆ ಸ್ಮರಿಸುತ್ತಾ ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಮರ್ಯಾದಾ ಪುರುಷೋತ್ತಮ ಶ್ರೀ ರಾಮಚಂದ್ರ ದೇವರಿಗೆ ಶ್ರೀ ಗಳವರು ಸಂಸ್ಥಾನ ಹಾಗೂ ಭಕ್ತಜನರು ಸಮರ್ಪಿಸಿದನ್ನು ಸಂತೋಷದಿಂದ ಸ್ವೀಕರಿಸಲಾಗಿದೆ . ತಮ್ಮ ಗುರುಗಳಾದ ವೃನ್ದಾವನಸ್ಥ ಪರಮಪೂಜ್ಯ ಶ್ರೀ ವಿಶ್ವೇಶ ತೀರ್ಥರು ಹರಿದ್ವಾರಕ್ಕೆ ಬಂದ ಸಂದರ್ಭದಲ್ಲಿ ವ್ಯಾಸಾಶ್ರಮದಲ್ಲಿರುವ ವ್ಯಾಸ ಘಾಟಿಗೆ ಬಂದು ಪುಣ್ಯ ಗಂಗಾ ಸ್ನಾನ , ಶ್ರೀ ದೇವರಿಗೆ ಪೂಜಾ ಪುರಸ್ಕಾರ ನಡೆಸುತ್ತಿದ್ದರು ಎಂದು ಸ್ಮರಿಸಿಕೊಂಡರು . ಈ ಸಂದರ್ಭದಲ್ಲಿ ಕೊಚ್ಚಿನ್ ತಿರುಮಲ ದೇವಳದ ಮೊಕ್ತೇಸರರಾದ ಜಗನ್ನಾಥ್ ಶೆಣೈ , ಜಿ ಯಸ್ ಬಿ ಸೇವಾಮಂಡಳದ ಆರ್ . ಜಿ . ಭಟ್ , ದೆಹಲಿ ಜಿ ಯಸ್ ಬಿ ಸಮಾಜದ ಪ್ರಕಾಶ್ ಪೈ , ಉಪಸ್ಥಿತರಿದ್ದರು