ಮಂಗಳೂರು: ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ವೇದವ್ಯಾಸ್ ಕಾಮತ್ ಸೋಮವಾರ ಪಾಲಿಕೆಯ ಚುನಾವಣಾಧಿಕಾರಿ ಕೆಂಪೇಗೌಡ ಅವರಿಗೆ ನಾಮಪತ್ರ ಸಲ್ಲಿಸಿದರು.
ಮಂಗಳಾದೇವಿ, ಕದ್ರಿ, ರಥಬೀದಿ ವೆಂಕಟ್ರಮಣ, ಬಜಲಕೇರಿ, ಕುದ್ರೋಳಿ ಕ್ಷೇತ್ರಗಳಿಗೆ ತೆರಳಿ ದೈವ ದೇವರುಗಳ ಆಶೀರ್ವಾದ ಪಡೆದುಕೊಂಡು ಕ್ಷೇತ್ರದ ಕಾರ್ಯಕರ್ತರು ಹಾಗೂ ನೂರಾರು ಸಂಖ್ಯೆಯ ಅಭಿಮಾನಿಗಳ ಜತೆಗೆ ಮೆರವಣಿಗೆ ಮೂಲಕ ಸಾಗಿ ಬಂತು. ಕಾರ್ಯಕರ್ತರು ಕೇಕೆ ಸಂಭ್ರಮಿಸಿದರು.
ಪಕ್ಷದ ರಾಷ್ಟ್ರ ಮಟ್ಟದ ಮತ್ತು ರಾಜ್ಯ ಮುಖಂಡರ ಬೆಂಬಲದಿಂದ ಮತ್ತೆ ಈ ಬಾರಿ ಕೂಡ ಟಿಕೆಟ್ ಸಿಕ್ಕಿದೆ. ಈ ಬಾರಿ ಕಾರ್ಯಕರ್ತರು ಹಾಗೂ ಕ್ಷೇತ್ರದ ಮತದಾರರ ಬೆಂಬಲದಿಂದ ಜಯಗಳಿಸುವ ವಿಶ್ವಾಸ ಇದೇ ಎಂದು ವೇದವ್ಯಾಸ್ ಕಾಮತ್ ಹೇಳಿದರು.
ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪಕ್ಷದ ಮುಖಂಡರಾದ ಮೋನಪ್ಪ ಭಂಡಾರಿ, ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ವಿಜಯ ಕುಮಾರ್ ಶೆಟ್ಟಿ, ಸುಧೀರ್ ಶೆಟ್ಟಿ ಹಾಗೂ ಪದಾಧಿಕಾರಿಗಳು ಇದ್ದರು.