ಮಂಗಳೂರು, ಅ.24: ದಕ್ಷಿಣ ಕನ್ನಡ ಸ್ಥಳೀಯಾಡಳಿತ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ 1704 ಹೆಚ್ಚು ಮತಗಳಿಂದ ಗೆಲುವು ಸಾಧಿಸಿದ್ದಾರೆ. 

ಅ.21ರಂದು ನಡೆದ ಚುನಾವಣೆಯ ಮತ ಎಣಿಕೆ ಇಂದು ಮಂಗಳೂರಿನ ಅಲೋಶಿಯಸ್ ಪಿಯು ಕಾಲೇಜಿನಲ್ಲಿ ನಡೆಯಿತು. 12 ಟೇಬಲ್ ಗಳಲ್ಲಿ ಮತಗಳನ್ನು ವಿಂಗಡಿಸಿ ಎಣಿಕೆ ನಡೆಸಲಾಯಿತು. ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರವಾಗಿ 3656 ಮತಗಳು ಹಾಗೂ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಪರವಾಗಿ 1952 ಮತಗಳು ಬಿದ್ದವು.