ವರದಿ ರಾಯಿ ರಾಜಕುಮಾರ ಮೂಡುಬಿದಿರೆ 

ಮೂಡುಬಿದಿರೆ: ಸಮಾಜ ಮಂದಿರದ 62ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ನಡೆದ ಪ್ರೌಢಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳ ವಾಲಿಬಾಲ್ ಪಂದ್ಯಾಟದಲ್ಲಿ ರೋಟರಿ ಆಂಗ್ಲ ಮಾಧ್ಯಮ ಶಾಲೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ತೀವ್ರ ತುರುಸಿನ ಪಂದ್ಯಾಟದಲ್ಲಿ ಮೂಡುಬಿದಿರೆ ಸಿಬಿಎಸ್ಸಿ ಎಕ್ಸಲೆಂಟ್ ಶಾಲೆಯು ರನ್ನರ್ ಅಪ್ ಸ್ಥಾನವನ್ನು ಗಳಿಸಿದೆ.