ಮೂಡುಬಿದಿರೆ: ಮೂಡುಬಿದಿರೆ ತಾಲೂಕಿನ ಪಡುಮಾರ್ನಾಡು ಗ್ರಾಮದ ಅಮನೊಟ್ಟು ಮಹಾವೀರ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಜುಲೈ 7 ರಂದು ಸರಕಾರದ ನವೋದಯ, ಮುರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ ಸಂಬಂಧಿಸಿದಂತೆ ವಿವರಣೆಯನ್ನು ಬೆಂಗಳೂರು ಸ್ಪಾರ್ಕ್ ಅಕಾಡೆಮಿಯ ತರಬೇತುದಾರ, ಸಂಪನ್ಮೂಲ ವ್ಯಕ್ತಿ, ಪತ್ರಿಕಾ ವರದಿಗಾರ ರಾಯಿ ರಾಜಕುಮಾರ ಮೂಡುಬಿದಿರೆ ಯವರು ನೀಡಿದರು. ಗ್ರಾಮೀಣ ಪ್ರದೇಶದಲ್ಲಿಯೇ ಕಲಿಕೆ ಮುಂದುವರೆಸಿದರೆ ಸಿಗುವ ವಿವಿಧ ಸೌಲಭ್ಯಗಳನ್ನು ಉದಾಹರಣೆ ಮೂಲಕ ಮನದಟ್ಟು ಮಾಡಿಸಿದರು. ಅಲ್ಲದೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆಯುವುದರಿಂದ ಆಗುವ ಲಾಭಗಳ ಬಗೆಗೆ ತಿಳಿಸಲಾಯಿತು.
ಇದೇ ಸಂದರ್ಭದಲ್ಲಿ ಮಕ್ಕಳಿಗೆ ಉಪಯುಕ್ತ ವಿವೇಕಾನಂದರ ವಿಚಾರಗಳಿಂದ ತುಂಬಿದ ಪುಸ್ತಕಗಳನ್ನು ಸಂಸ್ಥೆಯ ವಿದ್ಯಾರ್ಥಿಗಳ ಉಪಯೋಗಕ್ಕಾಗಿ ಲೈಬ್ರರಿಗೆ ನೀಡಲಾಯಿತು. ಮುಖ್ಯ ಶಿಕ್ಷಕಿ ಪ್ರತಿಭಾ ಸ್ವಾಗತಿಸಿದರು. ಹೇಮಾ ಕಾರ್ಯಕ್ರಮ ಸಂಯೋಜಿಸಿ, ಸುನಿತಾ ವಂದಿಸಿದರು.