ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆ ವಿದ್ಯಾಭಾರತಿ, ಪ್ರೇರಣಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಕಡಲಕೆರೆಯ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ ಉದ್ಘಾಟನೆ ಆಗಸ್ಟ್ 23 ರಂದು ಕಡಲಕೆರೆ ಪ್ರೇರಣಾ ಶಾಲೆಯಲ್ಲಿ ನಡೆಯಿತು. ದೀಪ ಪ್ರಜ್ವಲನದ ಮೂಲಕ ಸ್ಪರ್ಧೆಯನ್ನು ಉದ್ಘಾಟಿಸಿದ ದಕ್ಷಣ ಕನ್ನಡ ಜಿಲ್ಲಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಾತನಾಡಿ ಭಾರತದ ಯೋಗಾಸನದಿಂದ ಇಡೀ ವಿಶ್ವವೇ ಆರೋಗ್ಯವನ್ನು ಪಡೆಯುವಂತಾಗಿದೆ. ಅಂತಹ ಯೋಗಾಸನ ಸ್ಪರ್ಧೆ ಶಾಲಾ ಮಟ್ಟದಲ್ಲಿ ಇಲ್ಲಿ ನಡೆಯುತ್ತಿರುವುದು ಬಹಳ ಸಂತೋಷಕರ ಸಂಗತಿಯಾಗಿದೆ ಎಂದು ಶುಭ ಹಾರೈಸಿದರು.
ಶಾಲೆಯ ಸಂಚಾಲಕ ಎಂ ಶಾಂತಾರಾಮ ಕುಡ್ವ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ, ವಿದ್ಯಾಭಾರತಿ ಜಿಲ್ಲಾ ಆಟೋಟ ಪ್ರಮುಖ್ ಕರುಣಾಕರ್, ಪುರಸಭಾ ಉಪಾಧ್ಯಕ್ಷ ನಾಗರಾಜ ಪೂಜಾರಿ ವೇದಿಕೆಯಲ್ಲಿ ಹಾಜರಿದ್ದರು.
ಸೇವಾಂಜಲಿ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷ ರಾಜೇಶ್ ಎಂ ಬಂಗೇರ ಸ್ವಾಗತಿಸಿದರು. ಸುಚಿತ್ರ ಕಾರ್ಯಕ್ರಮ ನಿರೂಪಿಸಿದರು. ಶಾಲೆಯ ಮುಖ್ಯ ಮಾತಾಜಿ ವತ್ಸಲ ರಾಜೇಶ್ ಎಂ ಕೆ ಧನ್ಯವಾದ ಸಲ್ಲಿಸಿದರು.