ವರದಿ ರಾಯಿ ರಾಜಕುಮಾರ ಮೂಡುಬಿದಿರೆ 

ಈಗಿನ ಶಾಸಕ ಉಮಾನಾಥ ಕೋಟ್ಯಾನ್ ಅವರ ಮುತುವರ್ಜಿಯಿಂದ ಹೆಚ್ಚಿನ ಎಲ್ಲಾ ಇಲಾಖೆಗಳು ಒಂದೇ ಸೂರಿನಡಿ ಕಾರ್ಯನಿರ್ವಹಣೆ ಮಾಡುತ್ತಿರುವ ಮೂಡುಬಿದಿರೆ ತಾಲೂಕು ಕಛೇರಿಯಲ್ಲಿ ಕಳೆದ ಹಲವಾರು ತಿಂಗಳುಗಳಿಂದ ಸಾರ್ವಜನಿಕರಿಗೆ ಹಲವಾರು ತೊಂದರೆ ಆಗುತ್ತಿರುವ ಬಗ್ಗೆ ದೂರುತ್ತಿದ್ದರು. ಎಲ್ಲವನ್ನೂ ಮೂಡುಬಿದಿರೆ ತಹಸಿಲ್ದಾರ್ ಶ್ರೀಧರ್ ಮುಂದಲಮನಿ ಅವರ ಗಮನಕ್ಕೆ ತರಲಾಯಿತು.

ಅದಕ್ಕೆ ಪ್ರತಿಕ್ರಿಯಿಸಿದ ತಹಸಿಲ್ದಾರ್ ಈ ಬಗ್ಗೆ ಈಗಾಗಲೇ ಶಾಸಕ ಉಮಾನಾಥ ಕೋಟ್ಯಾನ್ ಅವರೊಂದಿಗೆ ಮಾತುಕತೆ ನಡೆದಿದ್ದು ನೀರಿನ ಒದಗಣೆ, ವಿದ್ಯುತ್ ಪರ್ಯಾಯ ವ್ಯವಸ್ಥೆ, ಲಿಫ್ಟ್ ರಿಪೇರಿ ಇತ್ಯಾದಿ ಎಲ್ಲವನ್ನೂ ಸಮರ್ಪಕ ಗೊಳಿಸುವ ನಿಟ್ಟಿನಲ್ಲಿ ಇನ್ನೆರಡು ದಿನಗಳಲ್ಲಿ ಕೆಲಸ ಪ್ರಾರಂಭವಾಗಲಿದೆ ಎಂದು ತಿಳಿಸಿದರು. ಒಟ್ಟಿನಲ್ಲಿ ಆದಷ್ಟು ಶೀಘ್ರ ಸಾರ್ವಜನಿಕರಿಗೆ ಸೂಕ್ತ ಸೌಲಭ್ಯ ದೊರಕಲಿ.