ಮಂಗಳೂರು, ಮೇ.31:- ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೇ.31ರ ಮಂಗಳವಾರ ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾದಿಂದ ಆಯೋಜಿಸಲಾಗಿದ್ದ ವಿಡಿಯೋ ಸಂವಾದದಲ್ಲಿ ಕೇಂದ್ರ ಪುರಸ್ಕøತ ಯೋಜನೆಗಳ ಫಲಾನುಭವಿಗಳೊಂದಿಗೆ ಮಾತುಕತೆ ನಡೆಸಿದರು.  

ಕೇಂದ್ರ ಸರ್ಕಾರವು ಬಡವರ ಕಲ್ಯಾಣಕ್ಕಾಗಿಯೇ ಹಲವಾರು ಯೋಜನೆಗಳನ್ನು ಅನುಷ್ಠಾನ ಗೊಳಿಸಿದೆ, ಆ ಯೋಜನೆಗಳಡಿ ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುವ ಮೂಲಕ ಅನುದಾನ ಸೋರಿಕೆಯನ್ನು ತಡೆಯಲಾಗಿದೆ, 8 ವರ್ಷಗಳ ಆಡಳಿತದಲ್ಲಿ ನಾನು ಪ್ರಧಾನ ಸೇವಕನಾಗಿ ಕಾರ್ಯ ನಿರ್ವಹಿಸಿದ್ದೇನೆ, ದೇಶದ 130ಕೋಟಿ ಜನರ ಪರಿವಾರದ ಸದಸ್ಯನಾಗಿದ್ದೇನೆ. ನಾವೆಲ್ಲರೂ ಜೊತೆಗೂಡಿ ಭಾರತವನ್ನು ಇಡೀ ವಿಶ್ವದಲ್ಲಿ ಉನ್ನತ ಸ್ಥಾನಕ್ಕೆ ಕೊಂಡೊಯ್ಯಲು ಪ್ರಯತ್ನಿಸೋಣ. ಇಂದು ದೇಶದ 10 ಕೋಟಿಗೂ ಹೆಚ್ಚಿನ ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯಡಿ ಸಹಾಯಧನವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ, ಇಡೀ ರಾಷ್ಟ್ರದ ಜನ ಈ ಗರೀಬ್ ಕಲ್ಯಾಣ್ ಸಮ್ಮೇಳನದಲ್ಲಿ ಭಾಗವಹಿಸಿರುವುದಕ್ಕೆ ಸಾಕ್ಷಿಯಾಗಿದ್ದಾರೆ ಎಂದರು.

ಇದಕ್ಕೂ ಮುನ್ನ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿಗಳು ವರ್ಚುವಲ್ ಮಾಧ್ಯಮದ ಮೂಲಕ ಸಂವಾದ ನಡೆಸಿ, ಅವರ ಅಭಿಪ್ರಾಯಗಳನ್ನು ಆಲಿಸಿದರು.  ಕರ್ನಾಟಕದ ಕಲಬುರಗಿ ಜಿಲ್ಲೆಯ ಸಂತೋಷಿ ಎಂಬ ಮಹಿಳಾ ಫಲಾನುಭವಿಯೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿಗಳು, ಸಂತೋಷಿ ಅವರು, ಅಯುಷ್ಮಾನ್  ಭಾರತ್ ಆರೋಗ್ಯ ಯೋಜನೆಯಿಂದಾದ ಲಾಭದ ಬಗ್ಗೆ ತಿಳಿದುಕೊಂಡರು.  ಮಾತನಾಡಿದ ಪ್ರಧಾನಮಂತ್ರಿಗಳು, ನೀವು ಯೋಜನೆಯ ಬಗ್ಗೆ ಮಾತನಾಡಿದ ರೀತಿ ನೋಡಿ ನನಗೆ ಅತೀವ ಸಂತೋಷವಾಯಿತು, ನಿಮ್ಮ ಗ್ರಾಮದಲ್ಲಿ ಉತ್ತಮ ನಾಯಕಿಯಾಗುವ ಎಲ್ಲ ಲಕ್ಷಣಗಳು, ಅರ್ಹತೆ ನಿಮ್ಮಲ್ಲಿವೆ ಎಂದು ಪ್ರಶಂಶಿಸಿದರು.

ಈ ವಿಡಿಯೋ ಸಂವಾದಲ್ಲಿ ದೇಶದ ವಿವಿಧ ರಾಜ್ಯಗಳ ಫಲಾನುಭವಿಗಳಾದ ಲಡಖ್-ತಶಿ ಲೆಹ, ಬಿಹಾರ್ ಲಲಿತಾ ದೇವಿ, ಪಶ್ಚಿಮ ತ್ರಿಪುರ- ಪಂಕಜ ಸಹನಿ, ಕರ್ನಾಟಕದ ಕಲಬುರಗಿ-ಸಂತೋಷಿ ಅವರೊಂದಿಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ, ಉಜ್ವಲ ಯೋಜನೆ, ಪೆÇೀಷಣ್ ಅಭಿಯಾನ್, ಮಾತೃ ವಂದನಾ ಯೋಜನೆ, ಸ್ವಚ್ಛ ಭಾರತ್ ಮಿಷನ್, ಜಲ ಜೀವನ ಮಿಷನ್, ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆ, ಪ್ರಧಾಣ ಮಂತ್ರಿ ಗರೀಬ್ ಕಲ್ಯಾಣ ಯೋಜನೆ, ಅಯುಷ್ಮಾನ್  ಆರೋಗ್ಯ ಕಾರ್ಡ್, ಪ್ರಧಾನ ಮಂತ್ರಿ ಮುದ್ರಾ ಯೋಜನೆಗಳಡಿ ಪ್ರಯೋಜನ ಪಡೆದ ಫಲಾನುಭವಿಗಳೊಂದಿಗೆ ಮಾತನಾಡಿದರು.

ನಗರದಲ್ಲಿ ಈ ವಿಡಿಯೋ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದ್ದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.  

ನಂತರ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ ದೊರೆತು 75ನೇ ವರ್ಷದ ಈ ಸಂದರ್ಭದಲ್ಲಿ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದ ನಮ್ಮ ಹಿರಿಯರನ್ನು ಸ್ಮರಿಸಬೇಕು, ಪ್ರಧಾನಮಂತ್ರಿಗಳ ಕೇಂದ್ರ ಪುರಸ್ಕøತ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸುವ ವಿಶೇಷ ಕಾರ್ಯಕ್ರಮಕ್ಕೆ ನಾವು ಸಾಕ್ಷಿಂಯಾಗಿದ್ದೇವೆ. ಕೇಂದ್ರದ ವಿವಿಧ ಯೋಜನೆಗಳ ಪ್ರಯೋಜನ ಪಡೆದ ಫಲಾನುಭವಿಗಳು ಹಾಗೂ ಪಡೆಯಲಿರುವವರ ಆಗು ಹೋಗುಗಳನ್ನು ತಿಳಿಯುವ ಪ್ರಯತ್ನ ಇದಾಗಿದೆ, ಸರ್ಕಾರ ನೀಡುವ ಯೋಜನೆಗಳು ನೇರವಾಗಿ ಫಲಾನುಭವಿಗಳಿಗೆ ದೊರೆಯುವುದು ಅತಿ ಸಂತಸದ ವಿಚಾರ, ಮುಂಬರುವ ದಿನಗಳಲ್ಲಿಯೂ ಸಹ ಸಾಕಷ್ಟು ಜನರಿಗೆ ಜಾಗೃತಿ ಮೂಡಿಸಬೇಕು, ಬಡವರಿಗೆ ಸರ್ಕಾರದ ಸವಲತ್ತುಗಳನ್ನು ತಿಳಿಸಿಕೊಡುವ ಪ್ರಯತ್ನಗಳಾಗಬೇಕು, ಅದು ಯಶಸ್ವಿಯಾಗಲು ಈ ರೀತಿಯ ಸಂವಾದಗಳು ಪ್ರೇರಣೆಯಾಗಲಿವೆ ಎಂದರು.

ಇಂದು ದೇಶದ 10 ಕೋಟಿಗೂ ಹೆಚ್ಚಿನ ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯಡಿ 11ನೇ ಕಂತಿನ 21 ಸಾವಿರ ಕೋಟಿ ಅನುದಾನವನ್ನು ನೇರವಾಗಿ ಅವರ ಖಾತೆಗಳಿಗೆ ಬಿಡುಗಡೆ ಮಾಡಲಾಗುತ್ತಿದೆ, ಪ್ರಧಾನಮಂತ್ರಿಗಳು ಕಟ್ಟಕಡೆಯ ಫಲಾನುಭವಿಗಳಿಗೂ ಸರ್ಕಾರದ ಯೋಜನೆಯನ್ನು ಮುಟ್ಟಿಸುತ್ತಿರುವ ಶೈಲಿ, ಅವರ ಕಾರ್ಯವೈಖರಿಗೆ ಸಾಕ್ಷಿಯಾಗಿದೆ, ಹಲವಾರು ವರ್ಷಗಳಿಂದ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳು ನೇರವಾಗಿ ತಲುಪುತ್ತಿರಲಿಲ್ಲ, ಯೋಜನೆಗಳ ಅನುμÁ್ಠನದಲ್ಲಿ ಬೇರೆ ಬೇರೆ ರೀತಿಯಲ್ಲಿ ಆದ ತೊಂದರೆಗಳನ್ನು ಗಮನಿಸಿ, ಈ ರೀತಿಯ ವ್ಯವಸ್ಥೆಗೆ ನಾಂದಿ ಹಾಡಲಾಯಿತು, ಪ್ರಧಾನಮಂತ್ರಿ ಆವಾಸ್ ಯೋಜನೆ, ಕಿಸಾನ್ ಸಮ್ಮಾನ್ ನಿಧಿ, ಪ್ರಧಾನಮಂತ್ರಿ ಉಜ್ವಲ, ಒನ್ ನೇಷನ್ ಒನ್ ರೇಷನ್ ಕಾರ್ಡ್, ಗರೀಬ್ ಕಲ್ಯಾಣ್, ಪ್ರಧಾನಮಂತ್ರಿ ಮುದ್ರಾ ಯೋಜನೆ, ಪಿಎಂ ಸ್ವಾನಿಧಿ, ಅಯುಷ್ಮಾನ್  ಭಾರತ್, ಮಾತೃವಂದನಾ ಸೇರಿದಂತೆ ಹತ್ತಾರು ಯೋಜನೆಗಳ ಕುರಿತು ಫಲಾನುಭವಿಗಳಿಂದ ಮತ್ತಷ್ಟು ಮಾಹಿತಿ ಸಂಗ್ರಹಿಸುತ್ತಿದ್ದಾರೆ, ಈ ಯೋಜನೆಗಳ ಬಗ್ಗೆ ಜಿಲ್ಲೆಯ ಜನರಲ್ಲಿ ಮತ್ತಷ್ಟು ಜಾಗೃತಿ ಮೂಡಿಸಬೇಕು, ಅವುಗಳ ಲಾಭ ಅರ್ಹರು ಪಡೆಯಲು ಅಧಿಕಾರಿಗಳು ಸಂಪೂರ್ಣ ಸಹಕರಿಸಬೇಕು, ಇದು ಮತ್ತಷ್ಟು ಫಲಾನುಭವಿಗಳಿಗೆ ಪೂರಕವಾದ ವಾತಾವರಣ ಸೃಷ್ಟಿಯಾಗುತ್ತದೆ, ಇಂದು ಪ್ರಧಾನಮಂತ್ರಿಗಳು ಪ್ರಪಂಚದ ಅತ್ಯತ್ತಮ ನಾಯಕರಾಗಿರುವುದು ದೇಶದ ಹೆಮ್ಮೆಯ ವಿಚಾರವಾಗಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಪ್ರಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಆನಂದ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ವೇದಿಕೆಯಲ್ಲಿದ್ದರು.

ಕೇಂದ್ರ ಪುರಸ್ಕøತ ವಿವಿಧ ಯೋಜನೆಗಳಡಿ ಆಯ್ಕೆಯಾಗಿರುವ ವಿವಿಧ ಫಲಾನುಭವಿಗಳಿಗೆ ಇದೇ ಸಂದರ್ಭದಲ್ಲಿ ಸವಲತ್ತುಗಳನ್ನು ವಿತರಿಸಲಾಯತು.

ವಿವಿಧ ಇಲಾಖೆಗಳ ಅಧಿಕಾರಿಗಳು, ಕೇಂದ್ರ ಪುರಸ್ಕ್ರತ  ಯೋಜನೆಗಳ ಲಾಭ ಪಡೆದ ಫಲಾನುಭವಿಗಳು ಭಾಗವಹಿಸಿದ್ದರು.