ಮಂಗಳೂರು:- ದೇಶದ ಅತ್ಯುನ್ನತ ನಾಗರೀಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿ ಪುರಸ್ಕ್ರತಕ್ಕೆ ಭಾಜನರಾದ ಮಹಾಲಿಂಗ ನಾಯ್ಕ ಅವರಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಫೆ.5ರ ಶನಿವಾರ ಬೆಳಿಗ್ಗೆ 10.30 ಗಂಟೆಗೆ ನಗರದ ಕೊಡಿಯಾಲ್ ಬೈಲ್‍ನ ಶಾರದಾ ವಿದ್ಯಾಲಯದಲ್ಲಿ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನೀಲ್ ಕುಮಾರ್ ಅವರು ಪದ್ಮಶ್ರೀ ಪ್ರಶಸ್ತಿ ಪುರಸ್ಕøತರಾದ ಮಹಾಲಿಂಗ ನಾಯ್ಕ ಅವರನ್ನು ಸನ್ಮಾನಿಸಲಿದ್ದಾರೆ.
ಕಾರ್ಯಕ್ರಮವನ್ನು ಲೋಕ ಸಭಾ ಸದಸ್ಯರಾದ ನಳೀನ್ ಕುಮಾರ್ ಕಟೀಲ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಶಾಸಕರಾದ ವೇದವ್ಯಾಸ ಕಾಮತ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಡಾ. ಕುಮಾರ್, ಶಾರದಾ ವಿದ್ಯಾಸಂಸ್ಥೆಯ ಅಧ್ಯಕ್ಷರಾಗಿರುವ ಪೆÇ್ರ. ಎಂ.ಬಿ. ಪುರಾಣಿಕ್ ಮತ್ತಿತರ ಗಣ್ಯರು ಭಾಗವಹಿಸುವರು.