ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಎನ್.ಎಸ್.ಯು.ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ರಂಗೋಲಿ ಹಾಗೂ ಮೆಹಂದಿ ಸ್ಪರ್ಧಾ ಕಾರ್ಯಕ್ರಮ ಶನಿವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಆಯೋಜಿಸಲಾಯಿತು.

ಈ ವೇಳೆ ಜಿಲ್ಲೆಯ ವಿವಿಧ ಕಾಲೇಜಿನ ವಿದ್ಯಾರ್ಥಿನಿಯರು ಸ್ಪರ್ಧೆಯಲ್ಲಿ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಎನ್.ಎಸ್.ಯು.ಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ನಗರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರಾಕೇಶ್ ದೇವಾಡಿಗ, ಜಿಲ್ಲಾ ಅಲ್ಪಸಂಖ್ಯಾತ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫಯಾಝ್ ಅಮ್ಮೆಮ್ಮಾರ್, ಯುವ ಕಾಂಗ್ರೆಸ್ ಮುಖಂಡರಾದ ನೌಫಲ್ ಅಬ್ದುಲ್ಲಾ, ಕೈಫ್, ರಾಜ್ಯ ಎನ್.ಎಸ್.ಯು.ಐ ಉಪಾಧ್ಯಕ್ಷ ಫಾರೂಕ್ ಬಯಾಬೆ, ಪ್ರಧಾನ ಕಾರ್ಯದರ್ಶಿ ಸುಹಾನ್ ಆಳ್ವ, ಎನ್.ಎಸ್.ಯು.ಐ ಪುತ್ತೂರು ತಾಲೂಕು ಅಧ್ಯಕ್ಷ ಕೌಶಿಕ್ ಗೌಡ, ಎ ಜಿಲ್ಲಾ ನ್.ಎಸ್.ಯು.ಐ ಪ್ರಧಾನ ಕಾರ್ಯದರ್ಶಿಗಳಾದ ಶಾನ್ ಸಿರಿ, ಅಬ್ದುಲ್ ರಾಝಿ, ಶಕೀಲ್ ಉಳ್ಳಾಲ, ಸಾಹಿಲ್ ಎ.ಕೆ, ನಜೀಬ್ ಮಂಚಿ ಉಪಸ್ಥಿತರಿದ್ದರು.