ಮುಂಬಯಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ) ಇದರ ಮಹಾ ಅಧಿವೇಶನವು ಕಳೆದ ಭಾನುವಾರ ಕೊಪ್ಪಳ ಇಲ್ಲಿನ ತುಮಕೂರು ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಸಭಾಗೃಹದಲ್ಲಿ  ಕೆಯುಡಬ್ಲ್ಯೂಜೆ ರಾಜ್ಯಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆಯಲ್ಲಿ ಜರುಗಿತು.

ಕೆಯುಡಬ್ಲ್ಯೂಜೆ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಕನ್ನಡ, ಸಂಸ್ಕೃತಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ಎಸ್. ತಂಗಡಗಿ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ  ಕೆ. ವಿ ಪ್ರಭಾಕರ್, ಕೊಪ್ಪಳ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ| ಬಿ. ಕೆ ರವಿ, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ.) ಮಹಾರಾಷ್ಟ್ರ ಘಟಕದ ರಾಜ್ಯಾಧ್ಯಕ್ಷ ರೋನ್ಸ್ ಬಂಟ್ವಾಳ್ ಇವರಿಗೆ ಕೆಯುಡಬ್ಲ್ಯೂಜೆ ಸಾಧಕ ವಿಶೇಷ ಪ್ರಶಸ್ತಿ ಪ್ರದಾನಿಸಿ ಗೌರವಿಸಿದರು. ಮಾಧ್ಯಮ ಹಾಗೂ ಸಮಾಜಸೇವಾ ಕ್ಷೇತ್ರದಲ್ಲಿ ಸಲ್ಲಿಸಿರುವ ಮೌಲಿಕವಾದ ಸೇವೆಯನ್ನು ಗಮನಿಸಿ ಬಂಟ್ವಾಳ್ ಇವರನ್ನು ಗೌರವಿಸಲಾಗಿದೆ ಎಂದು ಕೆಯುಡಬ್ಲ್ಯೂಜೆ ಪ್ರಧಾನ ಕಾರ್ಯದರ್ಶಿ ಜಿ. ಸಿ ಲೋಕೇಶ ತಿಳಿಸಿದರು.