ಮಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸೂಚನೆ ಮೇರೆಗೆ  ಕಾಂಗ್ರೆಸ್ ಸಾಮಾಜಿಕ ಜಾಲತಾಣ ಸುಳ್ಯ ವಿಧಾನಸಭಾ ಕ್ಷೇತ್ರದ ಸಂಯೋಜಕರಾಗಿದ್ದ ಸಚಿನ್ ರಾಜ್ ಶೆಟ್ಟಿ ಅವರನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷರನ್ನಾಗಿ ಕೆಪಿಸಿಸಿ ಸಾಮಾಜಿಕ ಜಾಲತಾಣ ರಾಜ್ಯಾಧ್ಯಕ್ಷ ಬಿ.ಅರ್ ನಾಯ್ಡು ನೇಮಕಗೊಳಿಸಿದ್ದಾರೆ.

ಪೆರುವಾಜೆ ಗ್ರಾಮ ಪಂಚಾಯತ್ ಸದಸ್ಯರಾಗಿರುವ ಸಚಿನ್ ರಾಜ್ ಶೆಟ್ಟಿ ಅವರು ಈ ಹಿಂದೆ ಸುಳ್ಯ ತಾಲೂಕು ಎನ್.ಎಸ್.ಯು.ಐ ಅಧ್ಯಕ್ಷರಾಗಿ, ರಾಜ್ಯ ಕಾರ್ಯದರ್ಶಿಯಾಗಿ, ಎರಡು ಬಾರಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ, ಸುಳ್ಯ ತಾಲೂಕು ಐಟಿ ಸೆಲ್ ಅಧ್ಯಕ್ಷರಾಗಿ, ಕಾಂಗ್ರೆಸ್ ಪ್ರಚಾರ ಸಮಿತಿ ಜಿಲ್ಲಾ ಕಾರ್ಯದರ್ಶಿಯಾಗಿ ಹಾಗೂ ಶಕ್ತಿ ಪ್ರೊಜೆಕ್ಟ್ ಸುಳ್ಯ ವಿಧಾನಸಭಾ ಕ್ಷೇತ್ರ ಸಂಚಾಲಕರಾಗಿ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ್ದು, ಸುಮಾರು 20 ವರ್ಷಗಳಿಂದ ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತರಾಗಿ ಪಕ್ಷದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.