ಮಡಂತ್ಯಾರು: ಮಕ್ಕಳು ಸಮಾಜದಲ್ಲಿ ಸಮರ್ಥವಾಗಿ ಬದುಕಬೇಕಾದರೆ ವಿದ್ಯೆಯು ಬೇಕು ,ವಿದ್ಯಾವಂತನಾದ ವ್ಯಕ್ತಿಯು ಜಗತ್ತಿನ ಯಾವ ಮೂಲೆಗೆ ಹೋದರೂ ಗೌರವಿಸಲ್ಪಡುತ್ತಾನೆ. ವಿದ್ಯೆಯ ಜೊತೆಗೆ ಸಂಸ್ಕಾರವನ್ನು ಬೆಳಸಿಕೊಂಡಾಗ ಯಶಸ್ಸನ್ನು ಪಡೆಯಲು ಸಾಧ್ಯ. ವಿದ್ಯೆಯಿಂದ ಬದುಕಿಗೆ ಅನ್ನ ದೊರೆತರೆ ಉತ್ತಮ ಸಂಸ್ಕಾರದಿಂದ ಬದುಕಿಗೆ ಅರ್ಥ ಪ್ರಾಪ್ತಿಯಾಗಲು ಸಾಧ್ಯ ಎಂದು ಉಜಿರೆ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಮಹಾವೀರ ಜೈನ್ ಇಚ್ಲಂಪಾಡಿ ಹೇಳಿದರು.
ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನಲ್ಲಿ ಜರುಗಿದ ಪ್ರಸಕ್ತ ಸಾಲಿನ ಪ್ರೌಢ ಶಾಲಾ ಹಾಗೂ ಪ.ಪೂ ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಮಹಾಸಭೆಯ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು.
ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಶಿಕ್ಷಕರು ಪ್ರಾಮಾಣಿಕ ಪ್ರಯತ್ನ ಮಾಡುತ್ತಾರೆ, ಮಕ್ಕಳು ಮನೆಯಲ್ಲಿ ಇರುವ ಸಂದರ್ಭದಲ್ಲಿ ಹೆತ್ತವರು ಓದಲು ಪ್ರೇರಣೆ ನೀಡಬೇಕು. ಮೊಬೈಲ್ ಬಳಸದಂತೆ ನೋಡಿ ಕೊಳ್ಳಬೇಕು, ನಿರಂತರ ಓದುವಿಕೆಯ ಮೂಲಕ ಶೈಕ್ಷಣಿಕ ಯಶಸ್ಸು ಖಂಡಿತ. ಮಕ್ಕಳಿಗೆ ಅಂಕಗಳು ಮಾತ್ರವಲ್ಲ ಉತ್ತಮ ವ್ಯಕ್ತಿತ್ವವನ್ನು ರೂಢಿಸಿಕೊಳ್ಳುವಂತೆ ನೋಡಿಕೊಳ್ಳುವುದು ಹೆತ್ತವರ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.
ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಂ| ಬೇಸಿಲ್ ವಾಸ್ ಅಧ್ಯಕ್ಷತೆ ವಹಿಸಿದ್ದರು.ಪ್ರಾಂಶುಪಾಲ ವಂ| ಜೆರೊಮ್ ಡಿಸೋಜಾ ಹಿಂದಿನ ಸಭೆಯ ವರದಿ ವಾಚಿಸಿ ಸಂಸ್ಥೆಯ ಶೈಕ್ಷಣಿಕ ಪ್ರಗತಿಯ ಕುರಿತು ಮಾಹಿತಿ ನೀಡಿದರು.
ಸೇಕ್ರೆಡ್ ಹಾರ್ಟ್ ಚರ್ಚ್ ಪಾಲನ ಮಂಡಳಿಯ. ಉಪಾಧ್ಯಕ್ಷ ಲಿಯೋ ರೊಡ್ರಿಗಸ್,ಪ್ರೌಢ ಶಾಲಾ ಹಾಗೂ ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷರಾದ ವಿಶ್ವನಾಥ ಪೂಜಾರಿ, ಕುಮಾರ್ ನಾಯ್ಕ ಸಭೆಯಲ್ಲಿ ಉಪಸ್ಥಿತರಿದ್ದರು. ಪ್ರಸಕ್ತ ಸಾಲಿನ ಪ್ರೌಢ ಶಾಲಾ ಹಾಗೂ ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಕಾರ್ಯಕಾರಿ ಸಮಿತಿಗೆ ಪ್ರತಿನಿಧಿಗಳನ್ನು ಆಯ್ಕೆ ಮಾಡಲಾಯಿತು.
ಪ್ರೌಢ ಶಾಲಾ ಮುಖ್ಯ ಶಿಕ್ಷಕ ಮೋಹನ್ ನಾಯಕ್ ಸ್ವಾಗತಿಸಿದರು. ಉಪನ್ಯಾಸಕರಾದ ಪ್ರಿಯಾಜ್ಯೋತಿ ಕುಟಿನ್ಹ ಪರಿಸರ ಜಾಗೃತಿಯ ಕುರಿತು ಉಪನ್ಯಾಸ ನೀಡಿದರು, ಪ್ರೌಢ ಶಾಲಾ ಹಾಗೂ ಕಾಲೇಜಿನ ಶಿಕ್ಷಕ ರಕ್ಷಕ ಸಂಘದ 2021-22 ನೇ ಸಾಲಿನ ಲೆಕ್ಕ ಪತ್ರವನ್ನು ಶಾಂತಿ ಮೇರಿ ಡಿಸೋಜಾ ಹಾಗೂ ವಿನ್ಸೆಂಟ್ ರೊಡ್ರಿಗಸ್ ಮಂಡಿಸಿದರು. ಅಂಜನಿ ರಾವ್ ವಂದಿಸಿದರು, ಸೂರಜ್ ಚಾರ್ಲ್ಸ್, ಗ್ರೇಸ್ ಲೀನಾ ಡಿಸೋಜಾ ನಿರೂಪಿಸಿದರು.