ವರದಿ ರಾಯಿ ರಾಜಕುಮಾರ ಮೂಡುಬಿದಿರೆ 

ಮೂಡುಬಿದರೆ-ಮುಲ್ಕಿ ಶಾಸಕ ಉಮಾನಾಥ ಕೋಟ್ಯಾನ್ ಅವರು ಫೆಬ್ರವರಿ 1 ರಂದು ಬಜ್ಪೆ ಪಟ್ಟಣ ಪಂಚಾಯತ್ ಕಚೇರಿಯಲ್ಲಿ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ನಿವಾರಿಸುವುದಕ್ಕೆ ಅಗತ್ಯ ಕ್ರಮಗಳನ್ನು ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಹಲವಾರು ಇಲಾಖೆ ಅಧಿಕಾರಿಗಳು ಹಾಜರಿದ್ದು ಆದಷ್ಟು ಶೀಘ್ರ ಸ್ಪಂದಿಸುವ ಭರವಸೆಯನ್ನು ನೀಡಿದರು. ಹಲವಾರು ಸಾರ್ವಜನಿಕರು ತಮ್ಮ ಊರಿನ ಹಾಗೂ ತಮ್ಮ ವೈಯಕ್ತಿಕ ಇಲಾಖಾ ಲೋಪದೋಷಗಳನ್ನು ಶಾಸಕರ ಗಮನಕ್ಕೆ ತಂದರು.