ಮಂಗಳೂರು: ವಿಧಾನ ಮಂಡಲದ ಉಭಯ ಸದನಗಳಲ್ಲಿ ಸಚಿವ ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ಕೈಬಿಡುವಂತೆ ಒತ್ತಾಯಿಸಿ ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರು ಅಹೋರಾತ್ರಿ ಧರಣಿ ನಡೆಸುತ್ತಿದ್ದ ವೇಳೆ ಹಿರಿಯ ಕಾಂಗ್ರೆಸ್ ಮುಖಂಡ, ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿ ಕಾರ್ಜುನ ಖರ್ಗೆ ಅವರು ಭೇಟಿ ನೀಡಿದರು. 

ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ವಿಧಾನ ಪರಿಷತ್ ಸದಸ್ಯರಾದ ಕೆ.ಹರೀಶ್ ಕುಮಾರ್, ಮಂಜುನಾಥ ಭಂಡಾರಿ ಹಾಗೂ ಮಾಜಿ ಶಾಸಕ ಎಂ. ನಾರಾಯಣ ಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.