ಮಂಗಳೂರು:- ಅಖಿಲ ಭಾರತ ಕಾಂಗ್ರೆಸ್ ಅಲ್ಪಸಂಖ್ಯಾಂತ ವಿಭಾಗದ ಅಧ್ಯಕ್ಷರಾದ ನದೀಮ್ ಜಾವೀದ್ ಅವರ ಆದೇಶದ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾಂತ ವಿಭಾಗದ ಅಧ್ಯಕ್ಷರಾದ ಶಹೀದ್  ಅಹ್ಮದ್ ರವರು ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಂಖ್ಯಾತರ ಘಟಕ ಅಧ್ಯಕ್ಷರನ್ನಾಗಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶಾಹುಲ್ ಹಮೀದ್ ಕೆ.ಕೆ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.

   ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಹರೀಶ್ ಕುಮಾರ್, ಮಾಜಿ ಸಚಿವರಾದ ರಮಾನಾಥ ರೈ, ಶಾಸಕರಾದ ಯು.ಟಿ.ಖಾದರ್, ಜಿಲ್ಲೆಯ ಮಾಜಿ ಶಾಸಕರು ಹಾಗೂ ಹಿರಿಯ ಕಾಂಗ್ರೆಸ್ ನಾಯಕರ ಶಿಫಾರಸ್ಸಿನ ಮೇರೆಗೆ ಶಾಹುಲ್ ಹಮೀದ್ ಕೆ.ಕೆ ಅವರನ್ನು ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಂಖ್ಯಾತರ ಘಟಕ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಡಿಸಿಸಿ ಕಚೇರಿ ಕಾರ್ಯದರ್ಶಿ ನಝೀರ್ ಬಜಾಲ್ ತಿಳಿಸಿರುತ್ತಾರೆ