ಮಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಶಶಿಧರ್ ಹೆಗ್ಡೆ ಅವರನ್ನು ವಿಟ್ಲ ಪಟ್ಟಣ ಪಂಚಾಯತ್ ಚುನಾವಣಾ ವೀಕ್ಷಕರಾಗಿ ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇತ್ತೀಚಿಗೆ ಆದೇಶ ಹೊರಡಿಸಿದ್ದಾರೆ.

“ತಮಗೆ ವಹಿಸಲಾಗಿರುವ ಸ್ಥಳೀಯ ಸಂಸ್ಥೆಗಳ ಪ್ರದೇಶಗಳಿಗೆ ತೆರಳಿ ಚುನಾವಣೆ ಮುಗಿಯುವವರೆಗೂ ಅಲ್ಲಿ ಹಾಜರಿದ್ದು, ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗುವಂತೆ ಶ್ರಮವಹಿಸಬೇಕು” ಎಂದು ಡಿ.ಕೆ.ಶಿವಕುಮಾರ್  ತಮ್ಮ ಆದೇಶದಲ್ಲಿ ಸೂಚಿಸಿದ್ದಾರೆ.