ಉಜಿರೆ: ಶಿವರಾತ್ರಿ ಸಂದರ್ಭದಲ್ಲಿ ಬುಧವಾರ ಬೆಳಗ್ಗಿನ ಜಾವ ಧರ್ಮಸ್ಥಳದಲ್ಲಿ ರಥೋತ್ಸವ ನಡೆಯಿತು. ನಾಡಿನೆಲ್ಲೆಡೆಯಿಂದ ಬಂದ ಸಾವಿರಾರು ಭಕ್ತಾದಿಗಳು ಶ್ರದ್ಧಾ-ಭಕ್ತಿಯಿಂದ ದೇವರದರ್ಶನ ಪಡೆದು, ರಥೋತ್ಸವ ವೀಕ್ಷಿಸಿ ಧನ್ಯತೆಯನ್ನು ಹೊಂದಿದರು. ಶಿವಪಂಚಾಕ್ಷರಿ ಪಠಣದೊಂದಿಗೆ ಭಕ್ತಾದಿಗಳು ಅಹೋರಾತ್ರಿ ಜಾಗರಣೆ ಮಾಡಿದರು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು.