ಉಜಿರೆ: ದೇಶದಲ್ಲಿಇತರ ರಾಜ್ಯಗಳಿಗಿಂತ ಕರ್ನಾಟಕಹೆಚ್ಚು ಅರಣ್ಯ ಪ್ರದೇಶವನ್ನು ಹೊಂದಿರುವರಾಜ್ಯವಾಗಿದೆ. ರಾಜ್ಯದಲ್ಲಿ 6,60,000 ಹೆಕ್ಟೇರ್ ಪ್ರದೇಶವನ್ನು ಡಿ ನೊಟಿಫಕೇಶನ್ ಮಾಡಿಕಂದಾಯ ಇಲಾಖೆಗೆ ನೀಡಿದ್ದು, ಅರಣ್ಯ ಇಲಾಖೆ 3,30,000 ಹೆಕ್ಟೇರ್‍ನಲ್ಲಿ ಗಿಡ-ಮರಗಳನ್ನು ಬೆಳೆಸಲು ಯೋಜನೆ ರೂಪಿಸಲಾಗಿದೆ ಎಂದು ಅರಣ್ಯ ಸಚಿವಉಮೇಶ್‍ಕತ್ತಿ ಹೇಳಿದರು.

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ರಾಜ್ಯದಲ್ಲಿ ಹತ್ತು ಲಕ್ಷ ಹಣ್ಣಿನ ಗಿಡಗಳ ನಾಟಿ ಕಾರ್ಯಕ್ರಮಕ್ಕೆ ಗುರುವಾರ ಬೆಳ್ತಂಗಡಿ ತಾಲ್ಲೂಕಿನ ಬಡಕೋಡಿಗ್ರಾಮದಎರ್ಮೋಡಿಅರಣ್ಯ ಪ್ರದೇಶದಲ್ಲಿ ಚಾಲನೆ ನೀಡಿಅವರುಮಾತನಾಡಿದರು.

    ಬೆಳಗಾವಿ, ಬಾಗಲಕೋಟೆ ಮತ್ತು ಬಿಜಾಪುರದಲ್ಲಿ 57,000 ಹೆಕ್ಟೇರ್ ಪ್ರದೇಶದಲ್ಲಿ ಬಿದಿರು ಬೆಳೆಸಲು ಉದ್ದೇಶಿಸಲಾಗಿದೆ.

    ಕಳೆದ ವರ್ಷ ಕಾಡುಪ್ರಾಣಿಗಳ ಕಾಟದಿಂದ ರೈತರಿಗಾದ ನಷ್ಟಕ್ಕೆ ಸರ್ಕಾರದಿಂದ ಇಪ್ಪತ್ತು ಕೋಟಿರೂ. ನೆರವು ನೀಡಲಾಗಿದೆಎಂದು ಸಚಿವರು ತಿಳಿಸಿದರು.

    ಮಾನವರು ಮತ್ತು ಪ್ರಾಣಿಗಳ ಮಧ್ಯೆ ಸಂಘರ್ಷ ತಡೆಯಲು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಆರಂಭಿಸಿದ ಯೋಜನೆತುಂಬಾ ಪ್ರಯೋಜನಕಾರಿಯಾಗಿದೆ. ಈ ಬಗ್ಯೆಅರಣ್ಯ ಇಲಾಖೆ ಪೂರ್ಣ ಸಹಕಾರ ನೀಡುತ್ತದೆಎಂದು ಭರವಸೆ ನೀಡಿದರು.

    ಎಲ್ಲರೂಗಿಡ-ಮರಗಳನ್ನು ಬೆಳೆಸಿ, ರಕ್ಷಣೆ ಮಾಡಿ ಮುಂದಿನ ಪೀಳಿಗೆಗೆ ಸುಸ್ಥಿತಿಯಲ್ಲಿ ಪ್ರಕೃತಿ-ಪರಿಸರವನ್ನು ಬಿಟ್ಟುಕೊಡುವುದು ನಮ್ಮೆಲ್ಲರ ಹೊಣೆಗಾರಿಕೆಯಾಗಿದೆಎಂದರು.

    ಅಧ್ಯಕ್ಷತೆ ವಹಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, “ಬದುಕು ಮತ್ತು ಬದುಕಲು ಬಿಡು” ಎಂಬುದು ಜೈನ ಧರ್ಮದ ಶ್ರೇಷ್ಠ ತತ್ವವಾಗಿದೆ. ನಾವೂ ಬದುಕಿ, ಇತರರೂ ಸುಖ-ಶಾಂತಿ, ನೆಮ್ಮದಿಯಿಂದ ಬದುಕಲು ಬಿಡಬೇಕು. ಪ್ರಾಣಿಗಳ ಮೊದಲ ಶತ್ರು ಮನುಷ್ಯನೆಆಗಿದ್ದಾರೆ. ಕಾಡಿನಲ್ಲಿ ಬೇಕಾದಆಹಾರ ಸಿಗದೆ ಅವುಗಳು ನಾಡಿಗೆ ಬರುತ್ತವೆ. ಆದುದರಿಂದ ಕಾಡಿನಲ್ಲಿ ಹಣ್ಣಿನ ಗಿಡ-ಮರಗಳನ್ನು ಬೆಳೆಸಿ ಅವುಗಳ ಫಲಗಳನ್ನು ಪ್ರಾಣಿಗಳಿಗೆ ಬಿಟ್ಟು ಬಿಡಲಾಗುವುದು. ಇದರಿಂದ ಕೃಷಿಗೆ ಪ್ರಾಣಿಗಳ ಉಪಟಳ ತಪ್ಪುತ್ತದೆ.

    ಪೊಲೀಸರು ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು ಈಗ ಜನಸ್ನೇಹಿಯಾಗಿ ಪ್ರೀತಿ-ವಿಶ್ವಾಸದಿಂದ ಕೆಲಸ ಮಾಡುವುದರಿಂದ ಈ ಯೋಜನೆ ಯಶಸ್ವಿಯಾಗುತ್ತದೆ ಎಂದು ಹೆಗ್ಗಡೆಯವರು ಹೇಳಿದರು.

    ಪ್ರಶಾಂತ ಪ್ರಕೃತಿ-ಪರಿಸರವನ್ನು ಪ್ರೀತಿಸಿ, ಗಿಡ-ಮರಗಳನ್ನು ಬೆಳೆಸಿ, ಫಲ-ಪುಷ್ಪಗಳನ್ನು ಪ್ರೀತಿಸಿ ಪರಿಸರಕ್ಕೆ ಹೊಂದಿಕೊಂಡು ನಾವು ಬದುಕಿದಾಗ ಪರಿಶುದ್ಧ ಆಮ್ಲಜನಕ ಎಲ್ಲರಿಗೂ ದೊರಕಿ ನಾವು ಆರೋಗ್ಯ ಪೂರ್ಣ ಜೀವನ ನಡೆಸಬಹುದು.

    ದಕ್ಷಿಣ ಕನ್ನಡದಲ್ಲಿ ಉತ್ತಮ ಮಳೆ, ಫಲವತ್ತಾದ ಮಣ್ಣು ಹಾಗೂ ಹೆಚ್ಚು ಅರಣ್ಯ ಪ್ರದೇಶ ಇರುವುದರಿಂದ ಇಲ್ಲಿನ ಪ್ರಕೃತಿ-ಪರಿಸರ ಎಲ್ಲರಿಗೂ ಆಕರ್ಷಣೀಯವಾಗಿದೆ.

    ಶಾಸಕ ಹರೀಶ್ ಪೂಂಜ ಮತ್ತು ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪ ಸಿಂಹ ನಾಯಕ್ ಶುಭಾಶಂಸನೆ ಮಾಡಿದರು.

    ಮಂಡ್ಯ ಜಿಲ್ಲೆಯ ಮಳವಳ್ಳಿಯ ಫಲಾನುಭವಿ ರಮೇಶ್, ಕೆ. ಮಾತನಾಡಿ ಕೆರೆಗಳ ಹೂಳೆತ್ತಿ ಆದ ಪ್ರಯೋಜನವನ್ನು ವಿವರಿಸಿ ಕೃತಜ್ಞತೆ ವ್ಯಕ್ತಪಡಿಸಿದರು.

    ಶೀಲಾ ಉಮೇಶ್‍ಕತ್ತಿ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್‍ಎಸ್. ನೆಟಲ್‍ಕರ್, ಉಪರಣ್ಯ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ, ಪಡ್ಯಾರ ಬೆಟ್ಟದ ಕೊಡಮಣಿತ್ತಾಯ ದೈವಸ್ಥಾನದ ಆಡಳಿತ ಮೊಕ್ತೇಸರ ಜೀವಂಧರ ಕುಮಾರ್, ಹೊಸಂಗಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕರುಣಾಕರ ಪೂಜಾರಿ, ಸಂಪತ್ ಸಾಮ್ರಾಜ್ಯ ಶಿರ್ತಾಡಿ ಉಪಸ್ಥಿತರಿದ್ದರು.

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್ ಸ್ವಾಗತಿಸಿದರು. ನಿರ್ದೇಶಕರಾದ ಸತೀಶ್ ಶೆಟ್ಟಿಧನ್ಯವಾದವಿತ್ತರು.

    ವಿವೇಕ್ ಪಾೈಸ್ ಮತ್ತು ಯಶವಂತ್ ಕಾರ್ಯಕ್ರಮ ನಿರ್ವಹಿಸಿದರು.