ಉಡುಪಿ,(ಮಾಚ್ 17) : ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆಯನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಸೂಚಿಸಿರುವ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್, ಸೂಚಿಸಿದರು. ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ , ಜಿಲ್ಲೆಯಲ್ಲಿ ಕೋವಿಡ್ 2 ನೇ ಅಲೆ ಹರಡುವಿಕೆಯನ್ನು ನಿಯಂತ್ರಿಸುವ ಕುರಿತು ಕೈಗೊಳ್ಳಬೆಕಾದ ಕ್ರಮಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಾರ್ವಜನಿಕರು ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಮಾಸ್ಕ್ ಧರಿಸದವರ ವಿರುದ್ದ ನಿಗಧಿತ ದಂಡ ವಸೂಲಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ನಗರ ಸ್ಥಳಿಯ ಸಂಸ್ಥೆಗಳು ಮತ್ತು ಗ್ರಾಮೀಣ ಪ್ರದೇಶದಲ್ಲಿ ದಂಡ ವಿದಿಸುವ ಅಧಿಕಾರವನ್ನು ವಿವಿಧ ಅಧಿಕಾರಿಗಳಿಗೆ ಈಗಾಗಲೇ ಪ್ರತ್ಯಾಯೋಜನೆ ಮಾಡಿದ್ದು, ದಂಡ ವಿಧಿಸದ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು , ಈಗಾಗಲೇ ಸುತ್ತೋಲೆಯಲ್ಲಿ ತಿಳಿಸಿರುವಂತೆ ಸಭೆ ಸಮಾರಂಭಗಳಲ್ಲಿ ನಿಗಧಿತ ಸಂಖ್ಯೆಗಿoತ ಹೆಚ್ಚು ಜನರು ಸೇರಿದಲ್ಲಿ ಸಂಬAದಪಟ್ಟವರ ವಿರುದ್ದ ದಂಡ ವಿಧಿಸುವಂತೆ ಸೂಚಿಸಿದ ಅವರು , ಅಧಿಕಾರಿಗಳು ಸಪರ್ಮಕವಾಗಿ ಕಾರ್ಯ ನಿರ್ವಹಿಸುವ ಕುರಿತು ಪರಿಶೀಲಿಸಲು ನೋಡೆಲ್ ಅಧಿಕಾರಿಯನ್ನು ನೇಮಕ ಮಾಡಲಾಗುವುದು ಎಂದರು.
ಎಲ್ಲಾ ಅಂಗಡಿ , ಮಾಲ್ ಗಳಲ್ಲಿನ ಸಂಸ್ಥೆಯ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು, ಹಾಗೂ ಗ್ರಾಹಕರಿಗೂ ಮಾಸ್ಕ್ ಧರಿಸುವಂತೆ ಸೂಚಿಸಬೇಕು , ಮಾಸ್ಕ್ ಧರಿಸದೇ ಕಾರ್ಯ ನಿರ್ವಹಿಸುವ ಸಂಸ್ಥೆಗಳ ಟ್ರೇಡ್ ಲೈಸೆನ್ಸ್ ರದ್ದುಗೊಳಿಸುವದು ಸೇರಿದಂತೆ ಎಪಿಡಮಿಕ್ ಕಾಯ್ದೆಯನುಸಾರ ಸಹ ಕ್ರಮ ಕೈಗೊಳ್ಳಲಾಗುವುದು. ಅಂಗಡಿ ಮತ್ತು ಮಾಲ್ ಗಳಿಗೆ ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಎಲ್ಲಾ ಹಿರಿಯ ನಾಗರೀಕರಿಗೆ ಕೋವಿಡ್ ಲಸಿಕೆ ನೀಡುವ ಕುರಿತಂತೆ ನಗರಪ್ರದೇಶದಲ್ಲಿ ಆಶಾ ಕಾರ್ಯಕರ್ತೆಯರು , ಮನೆಗಳಲ್ಲಿರುವ ಹಿರಿಯ ನಾಗರೀಕರು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಡಿಸಿ ಹೆಳಿದರು.
ಈ ಹಿಂದೆ ಕೋವಿಡ್ ಸಮಯದಲ್ಲಿ ರಚಿಸಲಾಗಿದ್ದ ಎಲ್ಲಾ ತಂಡಗಳು ತಮಗೆ ವಹಿಸಲಾಗಿದ್ದ ಕರ್ತವ್ಯಗಳನ್ನು ನಿರ್ವಹಿಸುವಂತೆ ಸೂಚಿಸಿದ ಜಿಲ್ಲಾಧಿಕರಿಗಳು, ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪತ್ತೆ ಹಂಚುವಿಕೆ , ಹೋಂ ಕ್ವಾರಂಟೈನ್ ಭೇಟಿ, ಕ್ವಾರಂಟೈನ್ ಆಪ್ ನಿರ್ವಹಣೆ, ಗ್ರಾಮೀಣ ಮಟ್ಟದಲ್ಲಿ ರಚಿಸಲಗಿರುವ ಕಾರ್ಯಪಡೆಗಳು ತಕ್ಷಣ ಸಭೆ ಸೇರಿ ತಮ್ಮ ವ್ಯಾಪ್ತಿಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.
ಸಾರ್ವಜನಿಕರಿಗೆ ಕೋವಿಡ್ ಸುರಕ್ಷತಾ ನಿಯಮಗಳ ಕುರಿತು ಹೆಚ್ಚಿನ ಪ್ರಮಾಣದಲ್ಲಿ ಅರಿವು ಮೂಡಿಸಲು ಪ್ರತೀ ಮನೆ ಮನೆಗೆ ಕರಪತ್ರಗಳ ಹಂಚಿಕೆ, ಜಿಂಗಲ್ಸ್ ಗಳ ಬಳಕೆ ಮುಂತಾದ ಕಾರ್ಯಕ್ರಮಗಳನ್ನು ಆಯೋಜಿಸುವಂಥೆ ತಿಳಿಸಿದರು.
ಉಡುಪಿ ಜಿಲ್ಲೆಯಲ್ಲಿ ಕಳೆದ 2-3 ದಿನಗಳಿಂದ ಕಂಡುಬರುತ್ತಿರುವ ಪಾಸಿಟಿವ್ ಪ್ರಕರಣಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಣಿ¥ಪಾಲದ ಎಂಐಟಿಯ ವ್ಯಾಪ್ತಿಯಲ್ಲಿ ಕಂಡುಬರುತ್ತಿದ್ದು, ಇಂದಿನ ಜಿಲ್ಲೆಯ ಒಟ್ಟು ಪ್ರಕರಣಗಳಲ್ಲಿ 27 ಎಂಐಟಿ ಯಲ್ಲಿಯೇ ಕಂಡುಬAದಿದ್ದು, ಈ ಪ್ರಧೇಶವನ್ನು ಕಂಟೈನ್ ಮೆಂಠ್ ಝೋನ್ ಮಾಡಲಾಗುತ್ತಿದೆ ಎಂದು ತಿಳಿಸಿದ ಜಿಲ್ಲಾಧಿಕಾರಿಗಳು,ಮಣಿಪಾಲ ಸೇರಿದಂತೆ ಜಿಲ್ಲೆಯ ಹಲವು ಕಡೆಗಳಲ್ಲಿ ಅವಧಿ ಮೀರಿ ಪಬ್ ಮತ್ತು ಬಾರ್ ಗಳು ತೆರೆದಿದ್ದು ಇದರಿಂದ ಕೋವಿಡ್ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಗಳಿದ್ದು ಇಂತಹ ಪಬ್ ಬಾರ್ ಗಳ ವಿರುದ್ದ ಅಬಕಾರಿ ಇಲಾಖೆಯಿಂದ ಕಠಿಣ ಕ್ರಮ ಕೈಗೊಳ್ಳುವಂತೆ ಜಿ.ಜಗದೀಶ್ ಸೂಚನೆ ನೀಡಿದರು.
ಜಿಲ್ಲೆಗೆ ಮಹಾರಾಷ್ಟç, ಮುಂಬೈ ಮತ್ತು ಕೇರಳದಿಂದ ಬರುವವರು 72 ಗಂಟೆಗಳ ಕೋವಿಡ್ ನೆಗೆಟಿವ್ ವರದಿ ಪಡೆಯುವುದು ಕಡ್ಡಯವಾಗಿದ್ದು, ನೆಗೆಟಿವ್ ವರದಿ ಇಲ್ಲದೇ ಜಿಲ್ಲೆಗೆ ಆಗಮಿಸುವವರ ಮಾಹಿತಿ ಇದ್ದಲ್ಲಿ ಸಾರ್ವಜಿನಿರಕು ಕೂಡಲೇ ಆರೋಗ್ಯ ಇಲಾಖೆಗೆ ಅಥವಾ ಸಂಬAದಪಟ್ಟ ಪಂಚಾಯತ್ ಅಥವಾ ತಹಸೀಲ್ದಾರ್ ಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕರಿ ತಿಳಿಸಿದರು.
ಕೋವಿಡ್ ನಿಯಂತ್ರಿಸುವ ಕುರಿತಂತೆ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸೂಕ್ತ ಅಧಿಕಾರಗಳನ್ನು ನೀಢಿದ್ದು, ಅಧಿಕಾರಿಗಳು ತಮಗೆ ನೀಡಿರುವ ಅಧಿಕಾರವನ್ನು ಸಮರ್ಪಕವಾಗಿ ಬಳಿಸಿಕೊಂಡು, ಸರ್ಕಾರ ಸೂಚಿಸುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಷ್ಠಾನ ಮಾಡಿ, ಜಿಲ್ಲೆಯನ್ನು ಕೋವಿಡ್ 2 ನೇ ಅಲೆಯಿಂದ ರಕ್ಷಿಸಲು ಕಾರ್ಯನಿರ್ವಹಿಸಿ, ಜಿಲ್ಲೆಯಲ್ಲಿ ಕೋವಿಡ್ ಮುಕ್ತಗೊಳಿಸಿ. ಸಾರ್ವಜನಿಕರು ಸಹಾ ಜಿಲ್ಲಾಡಳಿತ ಸೂಚಿಸುವ ಕ್ರಮಗಳನ್ನು ತಪ್ಪದೇ ಪಾಲಿಸುವುದರ ಮೂಲಕ ಜಿಲ್ಲೆಯನ್ನು ಕೋವಿಡ್ 2 ನೇ ಅಲೆಯಿಂದ ರಕ್ಷಿಸಲು ಸಹಕಾರ ನೀಡುವಂತೆ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಆಗಮಿಸುವ ಸಾರ್ವಜನಿಕರು ಕಡ್ಡಯವಾಗಿ ಮಾಸ್ಕ್ ಧರಿಸುವಂತೆ ಡಿಸಿ ತಿಳಿಸಿದರು.
ಗ್ರಾಮೀಣ ಪ್ರಧೇಶದಲ್ಲಿನ ಹಿರಿಯ ನಾಗರೀಕರಿಗೆ , ಸಮೀಪದ ಪ್ರಾಥಮಿಕ ಆರೋಗ್ಯ ಕೆಂಧ್ರಗಳಲ್ಲಿ ಗ್ರಾಮ ಪಂಚಾಯತ್ ವಾರು ದಿನಾಂಕ ನಿಗಧಿಪಡಿಸಿ, ಸದ್ರಿ ದಿನಾಂಕದAದು ಸಂಬAದಪಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಹಿರಿಯ ನಾಗರೀಕರನ್ನು ಕರೆ ತಂದು ಲಸಿಕೆ ನೀಡಲು ಪಿಡಿಓ ಗಳು ಮತ್ತು ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸಿಇಓ ಡಾ.ನವೀನ್ ಭಟ್ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಉಪ ವಿಭಾಗಾಧಿಕಾರಿ ರಾಜು, ಡಿಹೆಚ್‌ಓ ಡಾ. ಸುದೀರ್ ಚಂದ್ರ ಸೂಡಾ , ಕೋವಿಡ್ ನೋಢೆಲ್ ಅಧಿಕಾರಿ ಡಾ.ಪ್ರಶಾಂತ ಭಟ್ ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.