ಜುಲೈ 24ರಂದು ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ಮತ್ತು ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಮಂಗಳೂರಿನಲ್ಲಿ ಆಯೋಜಿಸುವ 8ನೇ ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನದಲ್ಲಿ ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 600ಕ್ಕಿಂತ ಮೇಲ್ಪಟ್ಟು ಅಂಕ, ಪಿಯುಸಿಯಲ್ಲಿ 575ಕ್ಕಿಂತ ಮೇಲ್ಪಟ್ಟು ಅಂಕಗಳನ್ನು ಗಳಿಸಿದ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಹೆಚ್ಚಿನ ವಿವರಗಳಿಗಾಗಿ ವಿದ್ಯಾರ್ಥಿಗಳು ಅಥವಾ ವಿದ್ಯಾರ್ಥಿಗಳ ಪೋಷಕರು 9108425813 ಅಥವಾ 8310388415 ಸಂಖ್ಯೆಗೆ ವಾಟ್ಸಾಪ್ ಮೂಲಕ ಜುಲೈ 10 ತಾರೀಕಿನೊಳಗೆ ಮಾಹಿತಿ ಪಡೆದುಕೊಂಡು ವಿವರ ಸಲ್ಲಿಸಬಹುದು ಎಂದು ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ಪ್ರಕಟಣೆಯಲ್ಲಿ ತಿಳಿಸಿದೆ.