ಉಡುಪಿ,(ಡಿಸೆಂಬರ್ 31) : ಹೊಸ ವರ್ಷ ಆಚರಣೆಯ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ಕಡಲು ತೀರದ ಪ್ರದೇಶಗಳಲ್ಲಿ ಅತೀ ಹೆಚ್ಚು ಜನರು ಸೇರುವುದರಿಂದ ಕೊರೊನಾ ಸೋಂಕು ಹರಡುವ ಸಾಧ್ಯತೆಯ ಹಿನ್ನೆಲೆಯಲ್ಲಿ ಹಾಗೂ ಮದ್ಯಪಾನ ಮಾಡಿ ಸಾರ್ವಜನಿಕರು ಬೀಚ್‌ಗೆ ಹೋಗಿ ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಳ್ಳುವ ಸಾಧ್ಯತೆ ಇರುವುದರಿಂದ, ಜಿಲ್ಲೆಯ ಎಲ್ಲಾ ಕಡಲು ತೀರ ಪ್ರದೇಶಗಳಲ್ಲಿ / ಬೀಚ್‌ಗಳಲ್ಲಿ ಸ್ಥಳೀಯ ಸಾಂಪ್ರಾದಾಯಿಕ ಮೀನುಗಾರರನ್ನು ಹೊರತುಪಡಿಸಿ ಇತರೇ ಯಾವುದೇ ಪ್ರವಾಸಿಗರು ಹಾಗೂ ಸಾರ್ವಜನಿಕರು ಗುರುವಾರ ಸಂಜೆ 6 ಗಂಟೆಯಿoದ ಜನವರಿ 1 ರ ಬೆಳಗ್ಗೆ 6 ಗಂಟೆಯವರೆಗೆ ಪ್ರವೇಶಿಸುವುದನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ.