ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಸ್ನಾತಕೋತ್ತರ ಹಿಂದಿ ವಿಭಾಗದ ವತಿಯಿಂದ ಇತ್ತೀಚೆಗೆ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಹಾಗೂ ಕಳೆದ ವರ್ಷದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ವಿದಾಯ ಕಾರ್ಯಕ್ರಮ- ʼಸ್ವದಾಯಿʼ ಯನ್ನು ಆಯೋಜಿಸಲಾಗಿತ್ತು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾರಿಯಪ್ಪ ಕಾಲೇಜಿನ ಹಿಂದಿ ವಿಭಾಗ ಮುಖ್ಯಸ್ಥ ಡಾ. ಶ್ರೀಧರ ಹೆಗ್ಡೆ ಮಾತನಾಡಿ, ವಿದ್ಯಾರ್ಥಿಗಳು ಹಿಂದಿ ಮತ್ತು ಪ್ರಾದೇಶಿಕ ಭಾಷೆಗಳತ್ತ ಗಮನ ಕೇಂದ್ರೀಕರಿಸುತ್ತಾ ಅನುವಾದ ಸಾಹಿತ್ಯದ ಕಡೆಗೆ ಒಲವು ತೋರಬೇಕು, ಎಂದರು. ನಂತರ ಕಳೆದ ವರ್ಷದ ವಿದ್ಯಾರ್ಥಿಗಳಿಗೆ ಭಾವಪೂರ್ಣ ವಿದಾಯ ಹೇಳಿದರೆ, ಹೊಸಬರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.
ಹಿಂದಿ ಸ್ನಾತಕೋತ್ತರ ವಿಭಾಗ ಮುಖ್ಯಸ್ಥೆ ಡಾ. ಸುಮಾ ಟಿ ಆರ್, ಪದವಿ ವಿಭಾಗದ ಮುಖ್ಯಸ್ಥೆ ಡಾ. ನಾಗರತ್ನ ಎನ್ ರಾವ್, ಸಹಪ್ರಾಧ್ಯಾಪಕರಾದ ಡಾ. ಗುರುದತ್ತ, ಡಾ. ಸಂಜೀವ್ ವೇದಿಕೆಯಲ್ಲಿದ್ದರು. ಸ್ನಾತಕೋತ್ತರ ಅರ್ಥಶಾಸ್ತ್ರ ವಿಭಾಗ ಸಂಯೋಜಕ ಡಾ. ಜಯವಂತ್ ನಾಯಕ್, ಸ್ನಾತಕೋತ್ತರ ವಾಣಿಜ್ಯ ವಿಭಾಗ ಸಂಯೋಜಕ ಡಾ. ಯತೀಶ್ ಕುಮಾರ್,ಇತಿಹಾಸ ಮತ್ತು ಪುರಾತತ್ವ ವಿಭಾಗ ಮುಖ್ಯಸ್ಥ ಡಾ. ಗಣಪತಿ ಗೌಡ, ಸ್ನಾತಕೋತ್ತರ ರಸಾಯನಶಾಸ್ತ್ರ ವಿಭಾಗದ ಸಂಯೋಜಕ ಡಾ. ಲಕ್ಷ್ಮಣ್ ಮೊದಲಾದವರು ಉಪಸ್ಥಿತರಿದ್ದರು.