ವರದಿ ರಾಯಿ ರಾಜಕುಮಾರ ಮೂಡುಬಿದಿರೆ 

ಉಡುಪಿ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಸಂಘದ ಕ್ರೀಡಾಕೂಟ ಇಂದು ಉಡುಪಿ ಅಜ್ಜರ ಕಾಡಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆಯಿತು. ಯೋಗಾಸನ ಸ್ಪರ್ಧೆಯ ವಿವಿಧ ವಿಭಾಗಗಳಲ್ಲಿ ಭಾಗವಹಿಸಿದ್ದ ಬೈಂದೂರು ತಾಲೂಕು ಮೆಟ್ಟಿನ ಹೊಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕ ರಾಜೀವ್ ಶೆಟ್ಟಿ ಎಂ ಅವರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅವರು ಭಾಗವಹಿಸಿದ್ದ ಸಾಂಪ್ರದಾಯಿಕ ಯೋಗಾಸನ ಸ್ಪರ್ಧೆಯಲ್ಲಿ, ಸಂಯೋಜನೆಗಳ ವೈಯಕ್ತಿಕ ಯೋಗಾಸನ ಸ್ಪರ್ಧೆಯಲ್ಲಿ, 

ಕಲಾತ್ಮಕ ಜೋಡಿ ಯೋಗಾಸನ ಸ್ಪರ್ಧೆಯಲ್ಲಿ, ಹಾಗೂ ಲಯಬದ್ಧ ಜೋಡಿ ಯೋಗಾಸನ ಸ್ಪರ್ಧೆಗಳಲ್ಲಿ ಪ್ರಥಮ ಬಹುಮಾನವನ್ನು ಪಡೆದಿರುತ್ತಾರೆ. ಅಲ್ಲದೆ ರಚನಾತ್ಮಕ ವೈಯಕ್ತಿಕ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನವನ್ನು ಗಳಿಸಿ ಬೆಂಗಳೂರಿನಲ್ಲಿ ಜುಲೈ ತಿಂಗಳಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ ಎಂದು ಮೆಟ್ಟಿನ ಹೊಳೆ ಶಾಲೆಯ ಮುಖ್ಯ ಶಿಕ್ಷಕಿ ಉಮಾ ಬಿ.ಎನ್. ತಿಳಿಸಿರುತ್ತಾರೆ.