ಆಗಸ್ಟ್ 6ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಅಂದೇ ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳುತ್ತದೆ ಎಂದು ಚುನಾವಣಾ ಆಯೋಗವು ಚುನಾವಣಾ ಪ್ರಕ್ರಿಯೆಯ ದಿನಾಂಕಗಳನ್ನು ಘೋಷಿಸಿದೆ.

ಹಾಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿಯು ಆಗಸ್ಟ್ 10ರಂದು ಮುಗಿಯಲಿದೆ.

ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಸಂಸತ್ತಿನ ಎರಡೂ ಮನೆಗಳವರು ಮಾತ್ರ ಮತದಾನ ಮಾಡುತ್ತಾರೆ.

ಜುಲಾಯಿ 18ಕ್ಕೆ ರಾಷ್ಟ್ರಪತಿ ಚುನಾವಣೆ ನಡೆಯುತ್ತದೆ. ಕರ್ನಾಟಕದ ಜೆಡಿಎಸ್ ಮುರ್ಮು ಅವರನ್ನು ಬೆಂಬಲಿಸಲಿದೆ ಎಂದು ಮಾಜೀ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.