ಮಂಗಳೂರು: ಪಾಣೆ ಮಂಗಳೂರು ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಮುನ್ನೂರು, ಕೊಳ್ನಾಡು ಜಿಲ್ಲಾ ಪಂಚಾಯತ್ ನಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಗುರವಾರ ಕ್ಷೇತ್ರವಾರು ಸಂವಾದ ಸಭೆ ನಡೆಸಿದರು.
ಪಂಚಾಯಿತಿಗೆ ಸಂಬಂಧಪಟ್ಟ ಸಮಸ್ಯೆಗಳ ಸೂಕ್ತ ಪರಿಹಾರಕ್ಕಾಗಿ ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಪ್ರಸ್ತಾಪಿಸುವುದಾಗಿ ತಿಳಿಸಿದವರು, ಪಾಣೆಮಂಗಳೂರು ಗ್ರಾಮೀಣ ಭಾಗದ ಜನರ ಅಭಿವೃದ್ಧಿ ಕಾರ್ಯಗಳ ಅಹವಾಲು ಸ್ವೀಕರಿಸಿ ಶೀಘ್ರ ನೆರವೇರಿಸುವ ಕುರಿತು ಭರವಸೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಬಿ. ರಮಾನಾಥ ರೈ, ಎಂ.ಎಸ್. ಮೊಹಮ್ಮದ್, ದ.ಕ. ಜಿಲ್ಲಾ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕೊಳ್ನಾಡು,
ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ರಕ್ಷಿತ್ ಶಿವರಾಂ, ಬಿ.ಎಂ ಅಬ್ಬಾಸ್ ಅಲಿ, ತುಂಬೆ ಚಂದ್ರಪ್ರಕಾಶ್ ಶೆಟ್ಟಿ, ಮಲ್ಲಿಕಾ ಪಕ್ಕಳ, ನವಾಝ್ ಉಪಸ್ಥಿತರಿದ್ದರು.