ಮಂಗಳೂರು:- ಎ ಸಿ ವಿನಯರಾಜ್ ರವರು ಮಂಗಳೂರು ಮಹಾನಗರ ಪಾಲಿಕೆಯ ಪ್ರತಿಪಕ್ಷ ನಾಯಕನಾಗಿ ಜವಾಬ್ದಾರಿ ವಹಿಸಿಕೊಂಡ ಮೇಲೆ ಮಾರ್ಚ್ 27, 2021 ರಂದು ಮಂಗಳೂರು ಧರ್ಮ ಪ್ರಾಂತ್ಯದ ಅತೀ ವಂದನೀಯ ಬಿಷಪ್ ಪೀಟರ್ ಪೌಲ್ ಸಲ್ಡಾನರವರನ್ನು ಅವರ ಗೃಹ ಕಛೇರಿಯಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದ ಕ್ಷಣ.
ಆ ಸಂಧರ್ಭದಲ್ಲಿ ಮಂಗಳೂರು ಧರ್ಮ ಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿ ಹಾಗೂ ಉದ್ಯಮಿ ರಾಯ್ ಕಾಸ್ಟಲಿನೊ ಹಾಗೂ ಮಂಗಳೂರು ಧರ್ಮ ಪ್ರಾಂತ್ಯದ ಪಾಲನಾ ಸಮಿತಿ ಸದಸ್ಯ ಹಾಗೂ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಸ್ಟ್ಯಾನಿ ಆಲ್ವರಿಸ್ ಉಪಸ್ಥಿತರಿದ್ದರು.