ಮಾಜೀ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸದೆ ತನ್ನ ಕ್ಷೇತ್ರವನ್ನು ಮಗ ಬಿ. ವೈ. ವಿಜಯೇಂದ್ರರಿಗೆ ಬಿಟ್ಟು ಕೊಡಲು ತೀರ್ಮಾನಿಸಿದ್ದಾರೆ.
ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸದೆ ಇಡೀ ರಾಜ್ಯದಲ್ಲಿ ಪ್ರಚಾರ ಪ್ರವಾಸದಲ್ಲಿ ಸಂಪೂರ್ಣವಾಗಿ ಈಡುಗೊಳ್ಳುವುದಾಗಿ ಯಡಿಯೂರಪ್ಪ ಹೇಳಿದರು. ನಾನು ಸ್ಪರ್ಧಿಸುತ್ತಿದ್ದ ಶಿಕಾರಿಪುರದಲ್ಲಿ ಮಗ ವಿಜಯೇಂದ್ರ ಸ್ಪರ್ಧಿಸುವರು ಎಂದೂ ಅವರು ಹೇಳಿದರು.
ಈ ಬಗೆಗೆ ಪ್ರತಿಕ್ರಿಯಿಸಿದ ವಿಜಯೇಂದ್ರರು ತಂದೆ ಮತ್ತು ಪಕ್ಷ ಹೇಗೆ ಮಾರ್ಗದರ್ಶನ ಮಾಡುತ್ತದೋ ಹಾಗೆ ನಡೆದುಕೊಳ್ಳುವುದಾಗಿ ತಿಳಿಸಿದರು.