ಮಂಗಳೂರು, ಜೂ.21:- ನಗರದ ಪುರಭವನದ ಆವರಣದಲ್ಲಿ ಜೂ.21ರ ಮಂಗಳವಾರ ಬೆಳಿಗ್ಗೆ ಜಿಲ್ಲಾಡಳಿತ, ಆಯುಷ್ ಇಲಾಖೆ, ನೆಹರು ಯುವ ಕೇಂದ್ರ ಹಾಗೂ ವಿವಿಧ ಯೋಗ ಸಂಘಟನೆಗಳ ಸಹಕಾರದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಶಾಸಕರಾದ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕರಾದ ಡಿ. ವೇದವ್ಯಾಸ ಕಾಮತ್ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಾರತದ ಮಣ್ಣಿನಲ್ಲಿ ಹುಟ್ಟಿದ ಯೋಗವನ್ನು ಇಂದು ಪ್ರಪಂಚದ ನೂರಾರು ದೇಶಗಳಲ್ಲಿ ಅಭ್ಯಾಸ ಮಾಡಲಾಗುತ್ತಿದೆ, ಅದನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ವಿಸ್ತರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಹತ್ವದ ಕೆಲಸ ಮಾಡಿದ್ದಾರೆ, ಹಿಂದೆ ಋಷಿಮುನಿಗಳಿಂದ ಹಿಡಿದ ಎಲ್ಲರಿಗೂ ಮನಸ್ಸಿಗೆ ನೆಮ್ಮದಿ ಹಾಗೂ ಆರೋಗ್ಯ ದೃಢತೆ ಕೊಡುವ ಯೋಗಾಭ್ಯಾಸವನ್ನು ಎಲ್ಲರೂ ಮಾಡುವ ಮೂಲಕ ಆರೋಗ್ಯದಿಂದಿರುವಂತೆ ಕರೆ ನೀಡಿದರು.
ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವೀಂದ್ರ ಶೆಟ್ಟಿ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ವಿವಿಧ ಆಸನಗಳನ್ನು ಮಾಡಿದರು.
ನೆಹರೂ ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ರಘುವೀರ್ ಸೂಟರ್ ಪೇಟೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕ ಪ್ರದೀಪ್ ಡಿಸೋಜಾ ಹಾಗೂ ಇತರೆ ಗಣ್ಯರು ಭಾಗವಹಿಸಿದ್ದರು.
ಯೋಗ ಗುರುಗಳಾದ ಗೋಪಾಲ ಕೃಷ್ಣ ದೇಲಂಪಾಡಿ ಅವರು ಯೋಗಾಸನದ ವಿವಿಧ ಭಂಗಿಗಳನ್ನು ವಿವರಿಸುತ್ತಾ, ಯೋಗಾಭ್ಯಾಸ ಮಾಡಿಸಿದರು.
ಆಯುಷ್ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸೇರಿದಂತೆ ಹಲವು ಯೋಗ ಸಂಘಟನೆಗಳ ಯುವಕ-ಯುವತಿಯರು, ಯೋಗ ಪ್ರಿಯರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ.ಮಹಮ್ಮದ್ ಇಕ್ಬಾಲ್ ಸ್ವಾಗತಿಸಿದರು.