ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

ಉಜಿರೆ: ಧರ್ಮಸ್ಥಳದಲ್ಲಿ ನವರಾತ್ರಿ ಸಂದರ್ಭದಲ್ಲಿ ಮಂಗಳೂರು ಅರ್ಕುಳದ ಪವಿತ್ರ ವಿನಯ್ ಮಯ್ಯ ಮತ್ತು ಅವರ ಮಗಳು ಕುಮಾರಿ ಇಂಚರ ಹಾಗೂ ಟಿ.ವಿ. ಗಿರಿ ಎರಡು ಗಂಟೆಗಳ ಕಾಲ ಭಕ್ತಿಗೀತೆಗಳನ್ನು ಸುಶ್ರಾವ್ಯವಾಗಿ ಹಾಡಿದರು. ಹಿಮ್ಮೇಳದಲ್ಲಿ ತಬಲಾವಾದಕರಾಗಿ […]

ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ: ಸಮಾರೋಪ ಸಮಾರಂಭ

ಉಜಿರೆ: ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗವಾಗಿದ್ದು, ಭಜನೆಯಿಂದ ಭಗವಂತನ ಸಾಕ್ಷಾತ್ಕಾರವಾಗಿ ಭಜಕರಲ್ಲಿ ಉತ್ತಮ ಸಂಸ್ಕಾರ ಮೂಡಿ ಬರುತ್ತದೆ ಎಂದು ಮೈಸೂರಿನ ಸುತ್ತೂರು ಮಠದ ಪೂಜ್ಯ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಹೇಳಿದರು. […]

ಆರೋಗ್ಯ ರಕ್ಷಣೆಗೆ ಭಜನೆ ಸಹಕಾರಿ: ವಿವೇಕ್ ಪಾಯಸ್

ಧರ್ಮಸ್ಥಳ: ಆರೋಗ್ಯ ರಕ್ಷಣೆಗೆ ಭಜನೆಯು ಅತಿ ಮುಖ್ಯ ಹಾದಿಯಾಗಿದ್ದು, ಬದುಕಿನ ಸುಗಮದ ದಾರಿಯೇ ಭಜನೆಯಾಗಿದೆ. ಆರೋಗ್ಯವಂತ ಶರೀರವೇ ಆತ್ಮದ ಅರಮನೆ ಎಂದು ರಾಜ್ಯ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ಪಾಯಸ್ ಅಭಿಪ್ರಾಯಪಟ್ಟರು. ಶ್ರೀ […]

ಎಸ್.ಡಿ.ಎಂ. ಆರೋಹಂ: ರಾಷ್ಟ್ರಮಟ್ಟದ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಉತ್ಸವ ಉದ್ಘಾಟನೆ

ಉಜಿರೆ: ವಿದ್ಯೆಯ ಜೊತೆಗೆ ಕ್ರೀಡೆಗಳು, ಯಕ್ಷಗಾನ, ಸಾಂಸ್ಕೃತಿಕ ಕಾರ್ಯಕ್ರಮಗಳು ಮೊದಲಾದ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ವ್ಯಕ್ತಿತ್ವ ವಿಕಸನದೊಂದಿಗೆ ಮಾನಸಿಕ ಶಾಂತಿ, ತೃಪ್ತಿ ಮತ್ತು ಸಂತೋಷ ಸಿಗುತ್ತದೆ ಎಂದು ಬೆಂಗಳೂರು ನೆಲಮಂಗಲದಲ್ಲಿರುವ ಕ್ಷೇಮವನದ ಸಿ.ಇ.ಒ. […]

ಧರ್ಮಸ್ಥಳ ಕಂಚಿಮಾರು ಪೂಜಾ ಸಮಿತಿಯಿಂದ 17ನೇ ಶ್ರೀಕೃಷ್ಣ ಜನ್ಮಾಷ್ಟಮಿ

ಧರ್ಮಸ್ಥಳ: ಕಿನ್ನಿಗೋಳಿ ಕಂಚಿಮಾರು ಪೂಜಾ ಸಮಿತಿಯ ವತಿಯಿಂದ 17ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವು ಭಕ್ತಿ, ಸಂಭ್ರಮ ಹಾಗೂ ಶ್ರದ್ಧೆಯಿಂದ ನಡೆಯಿತು. ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ […]

ಅಂತಾರಾಷ್ಟ್ರೀಯ ಶೈಕ್ಷಣಿಕ-ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ

ಉಜಿರೆ: ಅಂತಾರಾಷ್ಟ್ರೀಯ ಶೈಕ್ಷಣಿಕ-ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮದಡಿಯಲ್ಲಿ ಜಪಾನ್‌ನ 6 ವಿದ್ಯಾರ್ಥಿಗಳು ಈಗಾಗಲೆ ಉಜಿರೆಯ ಎಸ್.ಡಿ.ಎಂ. ಕಾಲೇಜಿಗೆ ಆಗಮಿಸಿ ವಿವಿಧ ಸಂಸ್ಥೆಗಳಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದರು. ಪ್ರಥಮವಾಗಿ ಧರ್ಮಸ್ಥಳಕ್ಕೆ ಭೇಟಿ ನೀಡಿದ ತಂಡ […]

ಧರ್ಮಸ್ಥಳದಲ್ಲಿ ಇಂದ್ರಿಯ ಆರೋಗ್ಯದ ಬಗ್ಗೆ ಅಂತಾರಾಷ್ಟ್ರೀಯ ಸಮಾವೇಶ “ಪುನರ್ವಸು”

ಉಜಿರೆ: ನಮ್ಮ ದೇಹದ ಪಂಚೇಂದ್ರಿಯಗಳಿಗೂ ಅವಿನಾಭಾವ ಸಂಬಂಧವಿದ್ದು, ಸಾವಿರಾರು ವರ್ಷಗಳಿಂದ ಬಳಸುತ್ತಿರುವ ಪಾರಂಪರಿಕ ಆಯುರ್ವೇದ ಪದ್ಧತಿ ಮೂಲಕ ಪಂಚೇಂದ್ರಿಯಗಳ ಬಲವರ್ಧನೆಯೊಂದಿಗೆ ಆರೋಗ್ಯಭಾಗ್ಯ ಹೊಂದಬಹುದು ಎಂದು ಕೇಂದ್ರಸರ್ಕಾರದ ಭಾರತೀಯ ಔಷಧ ಪದ್ಧತಿಯ ರಾಷ್ಟ್ರೀಯ ಪರಿಷತ್‌ನ ಅಧ್ಯಕ್ಷರಾದ […]

ಧರ್ಮಸ್ಥಳ: 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ

ಧರ್ಮಸ್ಥಳ:  ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರ ವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಂಗಳವಾರ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಭಜನಾ ಕಮ್ಮಟದ ಕಾರ್ಯದರ್ಶಿ ಎ. ವೀರು […]

ಧರ್ಮಸ್ಥಳದಲ್ಲಿ ‘ಕೆಸರ್‌ಡ್ ಒಂಜಿ ದಿನ’ ಸಂಭ್ರಮ

ಧರ್ಮಸ್ಥಳ: ಗ್ರಾಮೀಣ ಬದುಕಿನ ಸೊಗಡು, ಸಂಸ್ಕೃತಿ ಹಾಗೂ ಸಾಂಪ್ರದಾಯಿಕ ಕ್ರೀಡೆಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಮೂಡಂಗಲ್ ಫ್ರೆಂಡ್ಸ್, ಧರ್ಮಸ್ಥಳ ಇವರ ನೇತೃತ್ವದಲ್ಲಿ ಧರ್ಮಸ್ಥಳದಲ್ಲಿ ‘ಕೆಸರ್‌ಡ್ ಒಂಜಿ ದಿನ’ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು,“ಕೆಸರ್‌ಡ್ ಒಂಜಿ ದಿನದಂತಹ ಕಾರ್ಯಕ್ರಮಗಳು ಗ್ರಾಮೀಣ ಬದುಕಿನ ಸೊಗಡು, ಕೃಷಿ ಸಂಸ್ಕೃತಿ ಮತ್ತು ನಮ್ಮ ಪರಂಪರಾಗತ ಕ್ರೀಡೆಗಳನ್ನು ಹೊಸ ಪೀಳಿಗೆಗೆ ಪರಿಚಯಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಮಣ್ಣಿನೊಂದಿಗೆಮನುಷ್ಯನಿಗಿರವ ಅವಿನಾಭಾವ ಸಂಬಂಧವನ್ನು ಇಂತಹ ಕಾರ್ಯಕ್ರಮಗಳು ಮತ್ತಷ್ಟು ಗಟ್ಟಿಗೊಳಿಸುತ್ತವೆ. ಯುವಜನರು ನಮ್ಮ ಸಂಸ್ಕೃತಿ ಮತ್ತು  ಸಂಪ್ರದಾಯಗಳನ್ನು ಅರಿತು ಅವುಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯಬೇಕು” ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮಕ್ಕಳು, ಮಹಿಳೆಯರು ಹಾಗೂ ಪುರುಷರು ಸೇರಿದಂತೆ ವಿವಿಧ ವಯೋಮಾನದವರು ಉತ್ಸಾಹದಿಂದ ಭಾಗವಹಿಸಿದರು. ಕೆಸರುಗದ್ದೆಯಲ್ಲಿ ಆಯೋಜಿಸಲಾದ ವಿವಿಧ ಗ್ರಾಮೀಣ ಹಾಗೂ ಸಾಂಪ್ರದಾಯಿಕ ಕ್ರೀಡಾಸ್ಪರ್ಧೆಗಳು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದವು. ಕೆಸರಿನಲ್ಲಿ ಆಟವಾಡುತ್ತಾ ಸ್ಪರ್ಧಿಗಳು ಪ್ರದರ್ಶಿಸಿದ ಉತ್ಸಾಹ, ಚುರುಕುತನ ಮತ್ತು ಕ್ರೀಡಾಸ್ಫೂರ್ತಿ ನೆರೆದಿದ್ದವರನ್ನು ರಂಜಿಸಿತು. ಗ್ರಾಮೀಣ ಕ್ರೀಡೆಗಳ ಮೂಲಕ ಹಳೆಯ ಕಾಲದ ಕೃಷಿ ಬದುಕು ಮತ್ತು ಜನಪದ ಸಂಸ್ಕೃತಿಯನ್ನು ನೆನಪಿಸುವುದರ ಜೊತೆಗೆ, ಪರಸ್ಪರ ಬಾಂಧವ್ಯಹಾಗೂ ಸಾಮರಸ್ಯವನ್ನು ಬೆಳೆಸುವ ವೇದಿಕೆಯಾಗಿಯೂ ಕಾರ್ಯಕ್ರಮ ಮೂಡಿಬಂತು.  ಸ್ಥಳೀಯರು ಹಾಗೂ ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮಕ್ಕೆ ಮೆರುಗು ತಂದರು. ಈ ಸಂದರ್ಭದಲ್ಲಿ ಧರ್ಮಸ್ಥಳ ದೇವಸ್ಥಾನದ ಪಾರುಪತ್ಯಗಾರ್ ಪಿ. ಲಕ್ಷ್ಮೀನಾರಾಯಣ ರಾವ್, ಅನ್ನಪೂರ್ಣ ಛತ್ರದ ಮ್ಯಾನೇಜರ್ ಸುಬ್ರಹ್ಮಣ್ಯ ಪ್ರಸಾದ್, ವಕೀಲ ಕೇಶವ ಬೆಳಾಲ್, ಪ್ರಭಾಕರ ಪೂಜಾರಿ, ಉದಯ್ ಕುಮಾರ್,  ಗ್ರಾಮ ಪಂಚಾಯತ್ ಮಾಜಿ ಸದಸ್ಯರುಗಳಾದ ಮುರಳೀಧರ ದಾಸ್, ಹರ್ಷತ್ ಜೈನ್, ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಚಲನಚಿತ್ರ ನಟ ಯಶ್ ಧರ್ಮಸ್ಥಳಕ್ಕೆ ಭೇಟಿ

ಉಜಿರೆ: ಚಲನಚಿತ್ರ ನಟ ಯಶ್ ಮಂಗಳವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಚಲನಚಿತ್ರ ರಂಗದಲ್ಲಿ ಯಶ್‌ನ ಸೇವೆ ಮತ್ತು ಸಾಧನೆಯನ್ನು ಶ್ಲಾಘಿಸಿ ಅಭಿನಂದಿಸಿದ ಹೆಗ್ಗಡೆಯವರು ಇನ್ನೂ ಹೆಚ್ಚಿನ […]