ಧರ್ಮಸ್ಥಳದಲ್ಲಿ 55 ನೇ ವರ್ಷದ ಪುರಾಣ ಕ್ಯಾವ್ಯ ವಾಚನ-ಪ್ರವಚನ ಉದ್ಘಾಟನೆ

ಉಜಿರೆ: ಜ್ಞಾನ ದಾಸೋಹದಿಂದ ಆತ್ಮನ ಸಾಕ್ಷಾತ್ಕಾರವಾಗಿ ಭಗವಂತನ ಸಾನ್ನಿಧ್ಯದೊಂದಿಗೆ ಶಾಶ್ವತ ಸುಖ-ಶಾಂತಿ, ನೆಮ್ಮದಿ ಸಿಗುತ್ತದೆ ಎಂದು ಕನ್ಯಾಡಿ ರಾಮಕ್ಷೇತ್ರದ ಪೀಠಾಧಿಪತಿಗಳಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದರು. ಅವರು ಗುರುವಾರ ಧರ್ಮಸ್ಥಳದಲ್ಲಿ ಪ್ರವಚನ […]

ಧರ್ಮಸ್ಥಳದ ವಿರುದ್ಧ ಷಡ್ಯಂತ್ರ: ಅತಿ ಹಿಂದುಳಿದ ಮಠಾಧೀಶರ ಮಹಾಸಭಾ ವತಿಯಿಂದ ಧರ್ಮಸ್ಥಳಕ್ಕೆ ಬೆಂಬಲ ಪತ್ರ ಅರ್ಪಣೆ

ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿಗಳಾದ ಡಿ ವೀರೇಂದ್ರ ಹೆಗ್ಗಡೆಯವರ ವಿರುದ್ಧ ಷಡ್ಯಂತ್ರ ರೂಪಿಸಿ ಜಾಗತಿಕ ಮಟ್ಟದಲ್ಲಿ ಅನಧಿಕೃತ ಅಪಪ್ರಚಾರ ಹಾಗೂ ವದಂತಿಗಳನ್ನು ಪಸರಿಸಿ ಕಳಂಕವನ್ನುಂಟು ಮಾಡಿದ ಪ್ರಕರಣವನ್ನು ಖಂಡಿಸಿ ಆರೋಪಿಗಳ […]

ಬೇಲೂರು ಶಾಸಕ ಎಚ್.ಕೆ. ಸುರೇಶ್ ಧರ್ಮಸ್ಥಳಕ್ಕೆ ಭೇಟಿ

ಉಜಿರೆ: ರಾಜ್ಯ ವಿಧಾನಪರಿಷತ್ ಚುನಾವಣೆಯಲ್ಲಿ ಬಿ.ಜೆ.ಪಿ. ವಲಯದಲ್ಲಿ ಅಡ್ಡಮತದಾನದ ಬಗ್ಯೆ ತೀವ್ರ ಚರ್ಚೆಯಾಗುತ್ತಿದ್ದಂತೆ ಮಂಗಳವಾರ ಬೇಲೂರು ಶಾಸಕ ಎಚ್.ಕೆ. ಸುರೇಶ್ ಮುನ್ನೂರಕ್ಕೂ ಮಿಕ್ಕಿ ಬೆಂಬಲಿಗರೊಂದಿಗೆ ನೂರಕ್ಕೂ ಮಿಕ್ಕಿ ಕಾರುಗಳಲ್ಲಿ ಧರ್ಮಸ್ಥಳಕ್ಕೆ ಬಂದರಶಾಸಕರು ಧರ್ಮಾಧಿಕಾರಿ ಡಿ. […]

ಧರ್ಮಸ್ಥಳದಲ್ಲಿ “ಸ್ವಚ್ಛ ನೇತ್ರಾವತಿ” ಅಭಿಯಾನ

ಉಜಿರೆ: ಧರ್ಮಸ್ಥಳ ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಗುರುವಾರ ನೇತ್ರಾವತಿ ಸ್ನಾನಘಟ್ಟದಲ್ಲಿ “ಸ್ವಚ್ಛ ನೇತ್ರಾವತಿ” ಅಭಿಯಾನ ಆಯೋಜಿಸಲಾಯಿತು. ಬೆಳ್ತಂಗಡಿ ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಸಂಜೀವಿನಿ ಮಹಿಳಾ ಒಕ್ಕೂಟ, ಕನ್ಯಾಕುಮಾರಿ ಯುವತಿ […]

ಸಿರಿ ಸಂಸ್ಥೆಯ ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಸಿರಿ ಸಂಸ್ಥೆಯ ಸಂಸ್ಥಾಪಕರಾದ ಹೇಮಾವತಿ ವಿ. ಹೆಗ್ಗಡೆಯವರು ಬೆಳ್ತಂಗಡಿಯ ಮಾತೃಶ್ರೀ ಇಂಡಸ್ಟಿçಯಲ್ ಪಾರ್ಕ್ ಗೆ ಭೇಟಿ

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಅಧ್ಯಕ್ಷರಾದ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಸಿರಿ ಸಂಸ್ಥೆಯ ಸಂಸ್ಥಾಪಕರಾದ ಹೇಮಾವತಿ ವಿ. ಹೆಗ್ಗಡೆಯವರು ಜೂನ್ 24 ಬುಧವಾರದಂದು ಬೆಳ್ತಂಗಡಿಯಲ್ಲಿರುವ ಸಿರಿ […]

ಧರ್ಮಸ್ಥಳದಲ್ಲಿ 12 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಉಜಿರೆ: ನಮ್ಮ ಸನಾತನ ಸಂಸ್ಕೃತಿ ಮತ್ತು ಪರಂಪರೆಯೊಂದಿಗೆ ವಿಶ್ವಕ್ಕೆ ಭಾರತ ನೀಡಿದ ಅಮೂಲ್ಯ ಕೊಡುಗೆ “ಯೋಗ” ಆಗಿದ್ದು ಜಾಗತಿಕ ಮಟ್ಟದಲ್ಲಿ ಇದಕ್ಕೆ ಹೆಚ್ಚಿನ ಪ್ರಚಾರ ಅಗತ್ಯವಿದೆ ಎಂದು ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ […]

ಧರ್ಮಸ್ಥಳದಲ್ಲಿ ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಸಮಾರಂಭ

ಉಜಿರೆ: ಚತುರ್ವಿಧ ದಾನಪರಂಪರೆಯೊಂದಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವೀ. ಹೆಗ್ಗಡೆಯವರು ಮಾನವ ಕಲ್ಯಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಮಾಡುತ್ತಿರುವ ಬಹುಮುಖಿ ಸೇವಾಕಾರ್ಯಗಳು ಆದರ್ಶ ಹಾಗೂ […]

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.100 ಅಂಕ: ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಜಿ. ಮಾಧುರ್ಯಗೆ ಸನ್ಮಾನ

ಧರ್ಮಸ್ಥಳ: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ 2ರಲ್ಲಿ  ಧರ್ಮಸ್ಥಳದ  ಎಸ್.ಡಿ.ಎಂ. ಆಂಗ್ಲಮಾಧ್ಯಮ  ಶಾಲೆಯ ವಿದ್ಯಾರ್ಥಿನಿ ಜಿ. ಮಾಧುರ್ಯ ಅವರು 625ಕ್ಕೆ 625 ಅಂಕಗಳನ್ನು ಗಳಿಸಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಮಾಧುರ್ಯ ಅವರು ಧರ್ಮಸ್ಥಳದ ಅನ್ನಪೂರ್ಣ ಛತ್ರದ ಪ್ರಬಂಧಕರಾದ ಸುಬ್ರಹ್ಮಣ್ಯ ಪ್ರಸಾದ್ ಹಾಗೂ ಮಧುರಾ ದಂಪತಿಯ  ಪುತ್ರಿಯಾಗಿದ್ದಾರೆ. ಅವರ ಈ ಅಪೂರ್ವ ಸಾಧನೆಯನ್ನು ಅಭಿನಂದಿಸಿ, ಜೂನ್ 8ರಂದು ಧರ್ಮಸ್ಥಳ ಅನ್ನಪೂರ್ಣ ಛತ್ರದ ಹಿರಿಯ ಸಿಬ್ಬಂದಿಗಳಾದ  ಭರತ್‌ರಾಜ್ ಜೈನ್, ಶ್ರೇಣಿಕ್ , ರಾಜು ಸಪಲ್ಯ ,ದೇವಿಪ್ರಸಾದ್, ಅಪ್ಪು ಬಿ, ಬಾಬು ಬಿ, ಉಮೇಶ ಯಂ, ಬಾಕಕೃಷ್ಣ ಶೆಟ್ಟಿ ಹಾಗೂ ಇತರ ಸಿಬ್ಬಂದಿಗಳು ಜಿ. ಮಾಧುರ್ಯ ಅವರನ್ನು ಸನ್ಮಾನಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿಬ್ಬಂದಿಗಳು, ಮಾಧುರ್ಯ ಅವರ ಸಾಧನೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದ್ದು, ಮುಂದಿನ ವಿದ್ಯಾಭ್ಯಾಸದಲ್ಲಿಯೂ ಇದೇ ರೀತಿ ಉನ್ನತ ಸಾಧನೆ ಮಾಡಿ ಕುಟುಂಬ, ಶಾಲೆ ಹಾಗೂ ಸಮಾಜಕ್ಕೆ ಕೀರ್ತಿ ತರಲಿ ಎಂದು ಹಾರೈಸಿದರು.

ಧರ್ಮಸ್ಥಳದಲ್ಲಿ ‘ಶ್ರೀಗಣ’ ಕಿರುಚಿತ್ರ ಬಿಡುಗಡೆ

ಧರ್ಮಸ್ಥಳ: ತುಳುನಾಡಿನ ದೈವ ಆರಾಧನೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಬಿಂಬಿಸುವ ‘ಶ್ರೀಗಣ’ ಕಿರುಚಿತ್ರವನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರು ಜೂನ್ 9, 2026 […]

ವಿದ್ಯಾರ್ಥಿಗಳು ಭವಿಷ್ಯದ ಬಗ್ಯೆ ಸುಂದರ ಕನಸು ಕಂಡು ಅದನ್ನು ನನಸಾಗಿಸಲು ಪ್ರಯತ್ನಿಸಬೇಕು – ಸೋನಿಯಾ ಯಶೋವರ್ಮ

ಉಜಿರೆ: ಪಿ.ಯು.ಸಿ. ಶಿಕ್ಷಣದ ಪ್ರಮುಖ ಹಂತವಾಗಿದ್ದು ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಬಗ್ಯೆ ಸುಂದರ ಕನಸು ಕಂಡು ಅದನ್ನು ನನಸಾಗಿಸಲು ಪ್ರಯತ್ನಿಸಬೇಕು ಎಂದು ಸೋನಿಯಾ ಯಶೋವರ್ಮ ಹೇಳಿದರು. ಅವರು ಬುಧವಾರ ಉಜಿರೆಯಲ್ಲಿ ಎಸ್.ಡಿ.ಎಂ. ಸನಿವಾಸ ಪದವಿಪೂರ್ವ […]