Islamabad, Aug 26: Fifteen newborns were burnt alive after an AC compressor exploded in a government hospital in Pakistan’s capital Islamabad. The incident took place […]
Tag: pingara
ಧರ್ಮಸ್ಥಳದಲ್ಲಿ ‘ಕೆಸರ್‌ಡ್ ಒಂಜಿ ದಿನ’ ಸಂಭ್ರಮ
ಧರ್ಮಸ್ಥಳ: ಗ್ರಾಮೀಣ ಬದುಕಿನ ಸೊಗಡು, ಸಂಸ್ಕೃತಿ ಹಾಗೂ ಸಾಂಪ್ರದಾಯಿಕ ಕ್ರೀಡೆಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಮೂಡಂಗಲ್ ಫ್ರೆಂಡ್ಸ್, ಧರ್ಮಸ್ಥಳ ಇವರ ನೇತೃತ್ವದಲ್ಲಿ ಧರ್ಮಸ್ಥಳದಲ್ಲಿ ‘ಕೆಸರ್‌ಡ್ ಒಂಜಿ ದಿನ’ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು,“ಕೆಸರ್‌ಡ್ ಒಂಜಿ ದಿನದಂತಹ ಕಾರ್ಯಕ್ರಮಗಳು ಗ್ರಾಮೀಣ ಬದುಕಿನ ಸೊಗಡು, ಕೃಷಿ ಸಂಸ್ಕೃತಿ ಮತ್ತು ನಮ್ಮ ಪರಂಪರಾಗತ ಕ್ರೀಡೆಗಳನ್ನು ಹೊಸ ಪೀಳಿಗೆಗೆ ಪರಿಚಯಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಮಣ್ಣಿನೊಂದಿಗೆಮನುಷ್ಯನಿಗಿರವ ಅವಿನಾಭಾವ ಸಂಬಂಧವನ್ನು ಇಂತಹ ಕಾರ್ಯಕ್ರಮಗಳು ಮತ್ತಷ್ಟು ಗಟ್ಟಿಗೊಳಿಸುತ್ತವೆ. ಯುವಜನರು ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಅರಿತು ಅವುಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯಬೇಕು” ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮಕ್ಕಳು, ಮಹಿಳೆಯರು ಹಾಗೂ ಪುರುಷರು ಸೇರಿದಂತೆ ವಿವಿಧ ವಯೋಮಾನದವರು ಉತ್ಸಾಹದಿಂದ ಭಾಗವಹಿಸಿದರು. ಕೆಸರುಗದ್ದೆಯಲ್ಲಿ ಆಯೋಜಿಸಲಾದ ವಿವಿಧ ಗ್ರಾಮೀಣ ಹಾಗೂ ಸಾಂಪ್ರದಾಯಿಕ ಕ್ರೀಡಾಸ್ಪರ್ಧೆಗಳು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದವು. ಕೆಸರಿನಲ್ಲಿ ಆಟವಾಡುತ್ತಾ ಸ್ಪರ್ಧಿಗಳು ಪ್ರದರ್ಶಿಸಿದ ಉತ್ಸಾಹ, ಚುರುಕುತನ ಮತ್ತು ಕ್ರೀಡಾಸ್ಫೂರ್ತಿ ನೆರೆದಿದ್ದವರನ್ನು ರಂಜಿಸಿತು. ಗ್ರಾಮೀಣ ಕ್ರೀಡೆಗಳ ಮೂಲಕ ಹಳೆಯ ಕಾಲದ ಕೃಷಿ ಬದುಕು ಮತ್ತು ಜನಪದ ಸಂಸ್ಕೃತಿಯನ್ನು ನೆನಪಿಸುವುದರ ಜೊತೆಗೆ, ಪರಸ್ಪರ ಬಾಂಧವ್ಯಹಾಗೂ ಸಾಮರಸ್ಯವನ್ನು ಬೆಳೆಸುವ ವೇದಿಕೆಯಾಗಿಯೂ ಕಾರ್ಯಕ್ರಮ ಮೂಡಿಬಂತು. ಸ್ಥಳೀಯರು ಹಾಗೂ ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮಕ್ಕೆ ಮೆರುಗು ತಂದರು. ಈ ಸಂದರ್ಭದಲ್ಲಿ ಧರ್ಮಸ್ಥಳ ದೇವಸ್ಥಾನದ ಪಾರುಪತ್ಯಗಾರ್ ಪಿ. ಲಕ್ಷ್ಮೀನಾರಾಯಣ ರಾವ್, ಅನ್ನಪೂರ್ಣ ಛತ್ರದ ಮ್ಯಾನೇಜರ್ ಸುಬ್ರಹ್ಮಣ್ಯ ಪ್ರಸಾದ್, ವಕೀಲ ಕೇಶವ ಬೆಳಾಲ್, ಪ್ರಭಾಕರ ಪೂಜಾರಿ, ಉದಯ್ ಕುಮಾರ್, ಗ್ರಾಮ ಪಂಚಾಯತ್ ಮಾಜಿ ಸದಸ್ಯರುಗಳಾದ ಮುರಳೀಧರ ದಾಸ್, ಹರ್ಷತ್ ಜೈನ್, ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
