Somalia, Feb. 11: A passenger plane carrying 55 people has reportedly skidded off the runway and landed on a beach at Somalia’s main airport. The […]
Tag: pingara
ಪ್ರತಿಭಾವಂತ ಕ್ರೀಡಾಪಟುಗಳಿಗೆ ಉಚಿತ ಕ್ರೀಡಾ ತರಬೇತಿ ಹಾಗೂ ಶಿಕ್ಷಣದ ಅವಕಾಶ
2026-2027ನೇ ಶೈಕ್ಷಣಿಕ ಸಾಲಿನಲ್ಲಿ ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ಪ್ರೌಢಶಾಲೆ (ಕನ್ನಡ ಮತ್ತು ಆಂಗ್ಲ ಮಾಧ್ಯಮ) ಹಾಗೂ ಪದವಿಪೂರ್ವ ವಿದ್ಯಾಭ್ಯಾಸವನ್ನು ಕ್ರೀಡಾಕ್ಷೇತ್ರದೊಂದಿಗೆ ಉಚಿತವಾಗಿ ಪಡೆಯಲು ಬಯಸುವ ಪ್ರತಿಭಾವಂತ ಕ್ರೀಡಾಪಟುಗಳಿಗೆ ಇದೊಂದು ಉತ್ತಮ ಅವಕಾಶ. ತಮ್ಮ ತಾಲ್ಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರಮಟ್ಟದ ಬಾಸ್ಕೆಟ್‌ಬಾಲ್, ವಾಲಿಬಾಲ್, ಫುಟ್‌ಬಾಲ್, ಕ್ರಿಕೆಟ್, ವೈಟ್‌ಲಿಫ್ಟಿಂಗ್ ಮತ್ತು ಅಥ್ಲೆಟಿಕ್ಸ್‌ನಲ್ಲಿ ವಿಶೇಷ ಸಾಧನೆ ಮಾಡಿದ ಕ್ರೀಡಾಪಟುಗಳು ತಮ್ಮ ಸಂಪೂರ್ಣ ವಿವರಗಳನ್ನು ಪ್ರಮಾಣಪತ್ರದ ಪ್ರತಿಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಮಾರ್ಚ್ 07, 2026ರ ಒಳಗಾಗಿ ಕಳುಹಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಟ್ಟೆ ಆಫ್ ಕ್ಯಾಂಪಸ್ ಸೆಂಟರ್ 9482132079 ಅಥವಾ 9964319830 ಸಂಖ್ಯೆಗಳನ್ನು ಸಂಪರ್ಕಿಸಿ.
