ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಪಾದಯಾತ್ರಿಗಳ ಸನ್ಮಾನ

ಉಜಿರೆ: ಶಿವರಾತ್ರಿ ಸಂದರ್ಭದಲ್ಲಿ ಧರ್ಮಸ್ಥಳಕ್ಕೆ ಶ್ರದ್ಧಾ-ಭಕ್ತಿಯೊಂದಿಗೆ ಪಾದಯಾತ್ರೆಯಲ್ಲಿ ಬಂದ ಸಹಸ್ರಾರು ಭಕ್ತರು ತಮ್ಮಲ್ಲಿರುವ ದೋಷಗಳನ್ನೆಲ್ಲ ಇಲ್ಲೆ ತ್ಯಜಿಸಿ, ಉತ್ತಮ ಆಚಾರ-ವಿಚಾರಗಳೊಂದಿಗೆ ಸಭ್ಯ ನಾಗರಿಕರಾಗಿ ಸಂಸ್ಕಾರಯುತ ಸಾರ್ಥಕ ಜೀವನ ನಡೆಸಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. […]

ಉಜಿರೆ: ಆಧುನಿಕ ತಂತ್ರಜ್ಞಾನದ ಬಳಕೆಯಿಂದ ಸಂತಸದಾಯಕ ಕಲಿಕೆ ಸಾಧ್ಯವಾಗುತ್ತದೆ – ಹೇಮಾವತಿ ವೀ. ಹೆಗ್ಗಡೆ

ಉಜಿರೆ: ಆಧುನಿಕ ತಂತ್ರಜ್ಞಾನದ ಬಳಕೆಯಿಂದ ಕುತೂಹಲದೊಂದಿಗೆ ಸಂತಸದಾಯ ಕಲಿಕೆ ಸಾಧ್ಯವಾಗುತ್ತದೆ ಎಂದು ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆ ಹೇಳಿದರು.ಅವರು ಗುರುವಾರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ರೋಬೋಟ್ […]

ಎಸ್.ಡಿ.ಎಂ. ಕಲಾಕೇಂದ್ರಕ್ಕೆ ಅಮೇರಿಕಾದ ಹೃದ್ರೋಗ ತಜ್ಞ ಡಾ. ರಾಮಯ್ಯ ಗೌಡ ದಂಪತಿ ಭೇಟಿ, ಒಂದು ಲಕ್ಷ ರೂ. ದೇಣಿಗೆ

ಉಜಿರೆ: ಅಮೇರಿಕಾದ ಖ್ಯಾತ ಹೃದ್ರೋಗ ತಜ್ಞ ಡಾ. ರಾಮಯ್ಯ ಗೌಡ ಮತ್ತು ನರ್ಸಿಂಗ್ ಕಾಲೇಜು ಪ್ರಾಧ್ಯಾಪಕಿ ಡಾ. ಕಾನಿ ಗೌಡ ಶುಕ್ರವಾರ ಉಜಿರೆಯಲ್ಲಿರುವ ಎಸ್.ಡಿ.ಎಂ. ಕಲಾಕೇಂದ್ರಕ್ಕೆ ಭೇಟಿ ನೀಡಿ ಸಂಗೀತ, ಯಕ್ಷಗಾನ, ನೃತ್ಯ ಹಾಗೂ […]

ಧರ್ಮಸ್ಥಳದಲ್ಲಿ ಫೆ. 14 ರಂದು ಶಿವರಾತ್ರಿ ವೈಭವ! : ಪಾದಯಾತ್ರಿಗಳ ಗಡಣ, ಅಹೋರಾತ್ರಿ ಶಿವಪಂಚಾಕ್ಷರಿ ಪಠಣ, ಜಾಗರಣೆ, ಕಲಾಸೇವೆ

ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ನಾಳೆ, ಭಾನುವಾರ ಶಿವರಾತ್ರಿ ಪ್ರಯುಕ್ತ ನಾಡಿನೆಲ್ಲೆಡೆಯಿಂದ ಲಕ್ಷಕ್ಕೂ ಮಿಕ್ಕಿ ಭಕ್ತಾದಿಗಳು ಆಗಮಿಸಲಿದ್ದು ಅವರಿಗೆ ಸಕಲ ವ್ಯವಸ್ಥೆಗಳನ್ನು ಮಾಡಲಾಗಿದೆ. ಸುಮಾರು ಐವತ್ತು ಸಾವಿರಕ್ಕೂ ಮಿಕ್ಕಿ ಪಾದಯಾತ್ರಿಗಳು ಬರುವುದಾಗಿ ಈಗಾಗಲೆ […]

ಉಜಿರೆ: ಶಿವರಾತ್ರಿಗೆ ಪಾದಯಾತ್ರಿಗಳ ಸ್ವಾಗತಕ್ಕೆ ಸಕಲ ಸಿದ್ಧತೆ, ಸ್ವಾಗತ ಕಾರ್ಯಾಲಯ ಉದ್ಘಾಟನೆ

ಉಜಿರೆ: ನಾಡಿನೆಲ್ಲೆಡೆಯಿಂದ ಫೆ. 15 ರಂದು ಶಿವರಾತ್ರಿಗೆ ಧರ್ಮಸ್ಥಳಕ್ಕೆ 50,000ಕ್ಕೂ ಮಿಕ್ಕಿ ಪಾದಯಾತ್ರಿಗಳು ಬರುವ ನಿರೀಕ್ಷೆ ಇದ್ದು, ಅವರ ಸ್ವಾಗತ ಹಾಗೂ ವಸತಿ ಸೌಲಭ್ಯಕ್ಕೆ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ.ಧರ್ಮಸ್ಥಳದಲ್ಲಿ ಮುಖ್ಯ ಪ್ರವೇಶದ್ವಾರದ ಬಳಿ ಸ್ವಾಗತ […]

ಉಜಿರೆ: ವಾತ್ಸಲ್ಯ ಮನೆ ಬದುಕಿನ ನೆಮ್ಮದಿಗೆ ಅರಮನೆ – ಹೇಮಾವತಿ ವೀ. ಹೆಗ್ಗಡೆ

ಉಜಿರೆ: ವಾತ್ಸಲ್ಯ ಮನೆ ಬದುಕಿನ ನೆಮ್ಮದಿಗೆ ಅರಮನೆಯಾಗಿದೆ ಎಂದು ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆ ಹೇಳಿದರು.ಅವರು ಗುರುವಾರ ಅರಸಿನಮಕ್ಕಿ ಗ್ರಾಮದ ಜಯಶ್ರೀ ಅವರಿಗೆ ವಾತ್ಸಲ್ಯ ಮನೆ ಹಸ್ತಾಂತರಿಸಿ, ಅವಶ್ಯಕ ಮೂಲಭೂತ ಸೌಲಭ್ಯಗಳನ್ನು ನೀಡಿ ಶುಭ […]

‘ದುಶ್ಚಟಮುಕ್ತ ಆರೋಗ್ಯವಂತ ಜೀವನವನ್ನು ನಡೆಸಿರಿ’ – ಡಾ| ಹೆಗ್ಗಡೆ ಸಲಹೆ

ಉಜಿರೆ.“ ಮದ್ಯವ್ಯಸನಿ ಎಂದರೆ ಮದ್ಯದ ಅಮಲಿಗೆ ದಾಸರಾದವರು. ವ್ಯಸನವುದೈಹಿಕ, ಸಾಮಾಜಿಕ ಮತ್ತು ಆರ್ಥಿಕ ಹಾನಿಯನ್ನುಂಟು ಮಾಡುವ ಸಮಸ್ಯೆಯಾಗಿದೆ. ಯಾವ ಕುಟುಂಬದಲ್ಲಿ ವ್ಯಸನವೆಂಬ ಚಟ ಇದೆಯೋ ಅ ಕುಟುಂಬದಲ್ಲಿ ಸಾಂಸಾರಿಕವಾದ ಸಂಬಂಧಗಳು ಸರಿ ಇರುವುದಿಲ್ಲ. ಕುಟುಂಬದಲ್ಲಿ […]

ಉಜಿರೆ: ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಪದವಿ ಪ್ರದಾನ, ರ‍್ಯಾಂಕ್ ವಿಜೇತರ ಅಭಿನಂದನೆ

ಉಜಿರೆ: ಯಾವುದೇ ಕ್ಷೇತ್ರದಲ್ಲಿ ಉನ್ನತ ಸೇವೆ, ಸಾಧನೆ ಮಾಡಬೇಕಾದರೆ ಪ್ರತಿಯೊಬ್ಬರಲ್ಲಿಯೂ ಶಿಕ್ಷಣದ ಜೊತೆಗೆ ವಿಶೇಷ ಕೌಶಲ ಅನಿವಾರ್ಯವಾಗಿದೆ.ಪ್ರಸಕ್ತ ಶೈಕ್ಷಣಿಕ ವರ್ಷದಿಂದ (2025-2026) ರಾಜ್ಯಸರ್ಕಾರ ಮತ್ತು ಅಜೀಂ ಪ್ರೇಮ್‌ಜಿ  ಪ್ರತಿಷ್ಠಾನದ ಮಧ್ಯೆ ಈಗಾಗಲೇ ಮಾಡಿಕೊಂಡ ಒಪ್ಪಂದದಂತೆ […]

ಧರ್ಮಸ್ಥಳದಲ್ಲಿ ವಿರಾಜಮಾನರಾಗಿರುವ ಭಗವಾನ್ ಬಾಹುಬಲಿಸ್ವಾಮಿ ಮೂರ್ತಿಗೆ ಪಾದಾಭಿಷೇಕ

ಉಜಿರೆ: ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ವಿರಾಜಮಾನರಾಗಿರುವ ಭಗವಾನ್ ಬಾಹುಬಲಿಸ್ವಾಮಿ ಮೂರ್ತಿಗೆ ಮಂಗಳವಾರ ಬೀಡಿನಿಂದ ರತ್ನಗಿರಿಗೆ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ ಪಾದಾಭಿಷೇಕ ನಡೆಸಲಾಯಿತು. ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಮತ್ತು ಕ್ಷುಲ್ಲಕ ನಿರ್ವಾಣ […]

ಉಜಿರೆ: ರುಡ್ ಸೆಟ್ ಸಂಸ್ಥೆಯಲ್ಲಿ “ವನ್ ಮಿನಿಟ್ ಉಮಾ”ರಿಂದ ವಿಶೇಷ ಬ್ಯೂಟೀಶಿಯನ್ ಕಾರ್ಯಾಗಾರ

ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್‌ಧಾರಿ ಖ್ಯಾತ ಬ್ಯೂಟೀಶಿಯನ್ ಉಮಾ ಜಯಕುಮಾರ್ (ವನ್ ಮಿನಿಟ್ ಉಮಾ) ಇವರಿಂದ ಒಂದು ದಿನದ ವಿಶೇಷ ಬ್ಯೂಟೀಶಿಯನ್ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮವನ್ನು ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಕೆ.ಎನ್. ಜರ್ನಾದನ್ ಅವರು ಉದ್ಘಾಟಿಸಿ, ಕೌಶಲ್ಯಾಧಾರಿತ ತರಬೇತಿಗಳು ಸ್ವ ಉದ್ಯೋಗಕ್ಕೆ ದಾರಿ ಮಾಡಿಕೊಡುತ್ತವೆ ಎಂದು ಹೇಳಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶ್ರೀಮತಿ ಉಮಾ ಜಯಕುಮಾರ್ ಅವರು ಬ್ಯೂಟೀಶಿಯನ್ ವೃತ್ತಿಯಲ್ಲಿ ತಾಂತ್ರಿಕ ನೈಪುಣ್ಯ, ಸಮಯ ನಿರ್ವಹಣೆ ಹಾಗೂ ಗ್ರಾಹಕ ತೃಪ್ತಿಯ ಮಹತ್ವದ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರುಡ್ ಸೆಟ್ ಸಂಸ್ಥೆಯ ಕಾರ್ಯ ನಿರ್ವಾಹಕ ನಿರ್ದೇಶಕರಾದ ಬಿ.ಪಿ. ವಿಜಯಕುಮಾರ್ ವಹಿಸಿ ಮಾತನಾಡಿ, ಗ್ರಾಮೀಣ ಯುವಜನತೆಗೆ ಕೌಶಲ್ಯ ತರಬೇತಿ ನೀಡುವಲ್ಲಿ ರುಡ್ ಸೆಟ್ ಸಂಸ್ಥೆಯ ಪಾತ್ರವನ್ನು ವಿವರಿಸಿದರು. ಉಜಿರೆ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಅಜೇಯ ಸ್ವಾಗತಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ಅವರು ಮಾಡಿದರು. ಧನ್ಯವಾದ ಸಮರ್ಪಣೆಯನ್ನು ಹಿರಿಯ ಉಪನ್ಯಾಸಕರಾದ ಕೆ. ಕರುಣಾಕರ ಜೈನ್ ಅವರು ನೆರವೇರಿಸಿದರು. ಪ್ರಾರ್ಥನೆಯನ್ನು ಸೀತಾ ಹೆಗಡೆ ಹಾಗೂ ಶ್ರೀಮತಿ ಲಕ್ಷ್ಮಿ ಅವರು ಸಲ್ಲಿಸಿದರು. ವೇದಿಕೆಯಲ್ಲಿ ಅತಿಥಿ ಉಪನ್ಯಾಸಕಿಯಾದ ಮಾಧವಿ ರೈ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ರುಡ್ ಸೆಟ್ ಸಂಸ್ಥೆಯ ಕೇಂದ್ರ ಕಚೇರಿಯ ಹಿರಿಯ ಉಪನ್ಯಾಸಕಿ ಅನಸೂಯಾ, ಉಪನ್ಯಾಸಕರಾದ ಲೋಹಿತ್ ಜೈನ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ಕಾರ್ಯಾಗಾರದಲ್ಲಿ ರುಡ್ ಸೆಟ್ ಸಂಸ್ಥೆಯ ಬ್ಯೂಟೀಶಿಯನ್ ತರಬೇತಿ ಪಡೆದ ಹಳೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.