ಕಾರ್ಕಳ: ಕಸ್ತೂರಿರಂಗ ನ್ ವರದಿ ಹಾಗೂ ಸೂಕ್ತ ಪ್ರದೇಶ ಅಧಿ ಸೂಚನೆಯಿಂದ ಉಂಟಾಗಿರುವ ಗೊಂದಲಗಳನ್ನು ಕೇಂದ್ರ ಹಾಗೂ ರಾಜ್ಯ ಸರಕಾರ ಕೂಡಲೆ ನಿವಾರಿಸಿ ಜನ ವಸತಿ ಮತ್ತು ಕೃಷಿ ಪ್ರದೇಶಗಳ ಹಿತ ಕಾಪಾಡುವ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು ಎಂದು ಕಸ್ತೂರಿರಂಗನ್ ವಿರೋಧ ಹೋರಾಟ ಸಮಿತಿ ಅಧ್ಯಕ್ಷ ಮುಟ್ಲುಪಾಡಿ ಸತೀಶ್ ಶೆಟ್ಟಿ ಕಾರ್ಕಳದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಕ್ಕೆ ಮಾತನಾಡಿದ ಅವರು ಕಸ್ತೂರಿರಂಗ ನ್ ವರದಿ ವಿರೋಧಿಸಿ 25ಕ್ಕೂ ಅಧಿಕ ಹೋರಾಟಗಳನ್ನು ನಡೆಸಲಾಗಿದೆ.

ಆ ಸಂದರ್ಭದಲ್ಲಿ ಅರಣ್ಯ ಇಲಾಖೆಯಿಂದ ನೋಟಿಸುಗಳನ್ನು ನೀಡಲಾಗಿದ್ದು ಇದೀಗ ಮತ್ತೆ ಹೋರಾಟ ಆರಂಭವಾಗಿದ್ದು ಸರಕಾರಗಳು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದರು ಪರಿಸರ ಸಂರಕ್ಷಣೆ ಅಗತ್ಯವಾದರೂ ಅರಣ್ಯ ಕೃಷಿ ಜನವಸತಿ ಪ್ರದೇಶಗಳನ್ನು ಪ್ರತ್ಯೇಕವಾಗಿ ಗುರುತಿಸಿ ಗೊಂದಲ ನಿವಾರಿಸಬೇಕು ಎಂದು ಒತ್ತಾಯಿಸಿದರು.
ಕೇಂದ್ರ ಸರಕಾರದ ಪರಿಸರ ಸಚಿವಾಲಯಕ್ಕೆ ಕಸ್ತೂರಿರಂಗ ವರದಿ ಬಗ್ಗೆ ಸಾರ್ವಜನಿಕ ವಲಯದಲ್ಲಿ ನ ಅಪೇಕ್ಷಣೆ ಸಲ್ಲಿಸಲು ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಆಕ್ಷೇಪಣೆ ಸಲ್ಲಿಸಲು ಯಾರ ಮೂಲಕ ಎಲ್ಲಿ ಸಲ್ಲಿಸಬೇಕೆಂದು ಗೊಂದಲವು ಇದೆ. ಸರಕಾರ ಜಿಲ್ಲಾಡಳಿತ ಕೇರಳ ಮಾದರಿಯಲ್ಲಿ ಈ ವ್ಯವಸ್ಥೆ ರೂಪಿಸಿ ಗೊಂದಲ ಇಲ್ಲದಂತೆ ಜನರು ರೈತರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ಮಾಡಿಕೊಡಬೇಕು ಎಂದು ಸತೀಶ್ ಶೆಟ್ಟಿ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಡುಪ್ರಾಣಿಗಳ ಹಾವಳಿಯಿಂದ ಕೃಷಿ ನಾಶವಾಗುತ್ತಿದ್ದರೂ ಸಮರ್ಪಕ ಪರಿಹಾರ ದೊರೆಯುತ್ತಿಲ್ಲ. ಪರಿಸರ ಸಂರಕ್ಷಣೆ ಅಗತ್ಯವಾದರೂ, ಜನವಸತಿ ಪ್ರದೇಶ, ಕೃಷಿ ಪ್ರದೇಶ ಹಾಗೂ ಅರಣ್ಯ ಪ್ರದೇಶಗಳನ್ನು ಸ್ಪಷ್ಟವಾಗಿ ಗುರುತಿಸಿ ಗೊಂದಲ ನಿವಾರಿಸಬೇಕು ಎಂದು ಹೇಳಿದರು.
ವನ್ಯಜೀವಿಗಳ ಹಾವಳಿ ತಡೆಯಲು ಅರಣ್ಯ ಇಲಾಖೆ ತಡೆಗೋಡೆ ನಿರ್ಮಿಸಬೇಕು. ಏಳನೇ ಅಧಿಸೂಚನೆಯಲ್ಲಿರುವ ಗೊಂದಲಗಳನ್ನು ನಿವಾರಿಸಿ, ಮತ್ತೊಂದು ಅಧಿಸೂಚನೆ ಹೊರಡಿಸುವ ಮುನ್ನ ಸರ್ಕಾರ ಸ್ಪಷ್ಟವಾದ ಹಾಗೂ ಕ್ರಮಬದ್ಧ ಉತ್ತರ ನೀಡಬೇಕು ಎಂದರು.
ಪ್ರಸ್ತುತ ರಾಜ್ಯದಲ್ಲಿ 1,446 ಗ್ರಾಮಗಳನ್ನು ಅಧಿಸೂಚನೆಯಲ್ಲಿ ಗುರುತಿಸಲಾಗಿದ್ದು, ಈಗ ಹಲವು ಗ್ರಾಮಗಳನ್ನು ಕೈಬಿಡಲಾಗಿದ್ದು, ಈ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸ್ಪಷ್ಟತೆ ನೀಡಬೇಕು. ಜಿಲ್ಲಾಡಳಿತವು ಕಾಡು ಪ್ರದೇಶ, ಗ್ರಾಮ ಪ್ರದೇಶ ಮತ್ತು ಜನವಸತಿ ಪ್ರದೇಶಗಳನ್ನು ಗುರುತಿಸಿ ಸಮರ್ಪಕವಾಗಿ ಸರ್ವೆ ನಡೆಸಬೇಕು. ವೈಮಾನಿಕ ಸರ್ವೆಯನ್ನು ಒಪ್ಪುವುದಿಲ್ಲ. ಕಸ್ತೂರಿರಂಗನ್ ವರದಿಯ ಆಧಾರದ ಮೇಲಿನ ಗೊಂದಲಗಳನ್ನು ಸರಿಯಾಗಿ ಪರಿಶೀಲಿಸಿ ಅಗತ್ಯವಿದ್ದಲ್ಲಿ ವರದಿಯನ್ನು ಸಾರಾಸಗಟಾಗಿ ತಿರಸ್ಕರಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಮಿತಿಯ ಕಾರ್ಯದರ್ಶಿ ಹರಿಶ್ಚಂದ್ರ ತೆಂಡುಲ್ಕರ್, ಸಾಮಾಜಿಕ ಕಾರ್ಯಕರ್ತ ಜಗದೀಶ್ ಶೆಟ್ಟಿ ಅಜೆಕಾರು, ಪ್ರಗತಿಪರ ನಾಗರಿಕ ಹೋರಾಟ ಸಮಿತಿ ಕೆರೆಬೆಟ್ಟು ಸಂಜೀವ ಶೆಟ್ಟಿ, ಪ್ರಗತಿಪರ ಕೃಷಿಕ ಸೋಜನ್ ಜೇಮ್ಸ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
