ಕ್ರೈಸ್ಟ್ ಕಿಂಗ್ ನ ಮೂವರು ವಿದ್ಯಾರ್ಥಿನಿಯರು ವಾಲಿಬಾಲ್‍ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಾರ್ಕಳ: ತ್ರಿ ಎ ಸೈಡ್ ವಾಲಿಬಾಲ್ ಅಸೋಸಿಯೇಷನ್ ಆಫ್ ಕರ್ನಾಟಕದವರು ನಡೆಸಿದ 14 ರ ವಯೋಮಿತಿಯ ರಾಜ್ಯಮಟ್ಟದ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳ ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯ ಮೂವರು ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

ಏಳನೇ ತರಗತಿಯ ತ್ರಿಷ್ಮಾ, ಕೆಟ್ಲಿನ್ ಏಂಜಲ್ ಪಿಂಟೊ, ಆರನೇ ತರಗತಿಯ ನಿಶಾ ಡಿ’ಸೋಜ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಾಗಿದ್ದಾರೆ. ರಾಷ್ಟ್ರಮಟ್ಟದ ಪಂದ್ಯಾಟವು ಮಹಾರಾಷ್ಟ್ರದಲ್ಲಿ ನಡೆಯಲಿದೆ.

Leave a Reply

Your email address will not be published. Required fields are marked *